ನಕ್ಸಲರು ಕಾಡಿನಲ್ಲಿ ಅಡಗಿಸಿಟ್ಟಿದ್ದ ಶಸ್ತ್ರಾಸ್ತ್ರಗಳು ಪತ್ತೆ - Mahanayaka

ನಕ್ಸಲರು ಕಾಡಿನಲ್ಲಿ ಅಡಗಿಸಿಟ್ಟಿದ್ದ ಶಸ್ತ್ರಾಸ್ತ್ರಗಳು ಪತ್ತೆ

naxal
11/01/2025

ಚಿಕ್ಕಮಗಳೂರು: 6 ಜನ ನಕ್ಸಲರು ಶರಣಾದ ಬೆನ್ನಲ್ಲೇ ಅವರ ಶಸ್ತ್ರಾಸ್ತ್ರಗಳಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ನಕ್ಸಲರ ಗನ್ ಗಳು ಕಿತ್ತಲೇಗಂಡಿ ಕಾಡಿನಲ್ಲಿ ಪತ್ತೆಯಾಗಿದೆ.

ಜಯಪುರ‌ ಠಾಣಾ ವ್ಯಾಪ್ತಿಯಲ್ಲಿ  ರಿವಾಲ್ವರ್, ಬಂದೂಕು ಸೇರಿದಂತೆ 5 ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ. ನಕ್ಸಲರು ಶರಣಾಗತಿಗೂ ಮುನ್ನ ಮೇಗೂರು ಅರಣ್ಯದಲ್ಲಿ ಅಡಗಿದ್ದರು. ಶರಣಾಗುವ ದಿನ ಕೊನೆಯದ್ದಾಗಿ ಅರಣ್ಯದಲ್ಲಿ ಸಭೆ  ನಡೆಸಿ ಬಳಿಕ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಿದ್ದರು.

ಕೊಪ್ಪ ಠಾಣೆ ಇನ್ಸ್ ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ತಂಡ ಕಳೆದ ಎರಡು ದಿನಗಳಿಂದ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಲಾಗಿದೆ. ನಕ್ಸಲರು ಕೊನೆಯ ಬಾರಿ ಸಭೆ ನಡೆಸಿದ್ದ ಸ್ಥಳದಲ್ಲೇ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ