ಮಾಜಿ ಬಿಜೆಪಿ ಶಾಸಕನ ಮನೆ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ: ಮನೆಯಲ್ಲಿ ಮೊಸಳೆ ಹಾವು ಪತ್ತೆ!
ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಜಿ ಬಿಜೆಪಿ ಶಾಸಕ ಹರ್ವಂಶ್ ಸಿಂಗ್ ರಾಥೋಡ್ ಅವರ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ಮೊಸಳೆಗಳು ಮತ್ತು ಇತರ ಸರೀಸೃಪಗಳು ಪತ್ತೆಯಾಗಿವೆ. ಕೋಟ್ಯಂತರ ರೂಪಾಯಿ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ರಾಥೋಡ್ ಮತ್ತು ಬೀಡಿ ತಯಾರಕ ಮತ್ತು ಕಟ್ಟಡ ಗುತ್ತಿಗೆದಾರ ರಾಜೇಶ್ ಕೇಶರ್ವಾನಿ ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿಯ ಸಮಯದಲ್ಲಿ ಅಧಿಕಾರಿಗಳು ರಾಥೋಡ್ ಅವರ ನಿವಾಸದಲ್ಲಿ ಮೂರು ಮೊಸಳೆಗಳು ಮತ್ತು ಇತರ ಸರೀಸೃಪಗಳನ್ನು ಪತ್ತೆಹಚ್ಚಿದ್ದಾರೆ.
ಆದಾಯ ತೆರಿಗೆ ಸಿಬ್ಬಂದಿ ಮಾಹಿತಿ ನೀಡಿದ ನಂತರ ಅರಣ್ಯ ಅಧಿಕಾರಿಗಳು ಪ್ರಾಣಿಗಳನ್ನು ರಕ್ಷಿಸಿದ್ದಾರೆ.
ಘಟನೆಯನ್ನು ದೃಢಪಡಿಸಿದ ಮಧ್ಯಪ್ರದೇಶದ ಅರಣ್ಯ ಪಡೆ ಮುಖ್ಯಸ್ಥ ಅಸೀಮ್ ಶ್ರೀವಾಸ್ತವ ಅವರು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಐಟಿ ಅಧಿಕಾರಿಗಳು ಮೊಸಳೆಗಳ ಉಪಸ್ಥಿತಿಯ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj