ಸಿ.ಟಿ.ರವಿ ದೊಡ್ಡ ಡ್ರಾಮಾ ಮಾಸ್ಟರ್: ಬೆದರಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು
![d k shivakumar](https://www.mahanayaka.in/wp-content/uploads/2025/01/d-k-shivakumar-2.jpg)
ಚಿಕ್ಕಮಗಳೂರು: ಸಿ.ಟಿ.ರವಿಗೆ ಕೊಲೆ ಬೆದರಿಕೆ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಶೃಂಗೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸಿ.ಟಿ.ರವಿ ದೊಡ್ಡ ಡ್ರಾಮಾ ಮಾಸ್ಟರ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ಅವರನ್ನ ನ್ಯಾಷನಲ್ ಲೀಡರ್ ಎಂದು ತಿಳಿದುಕೊಂಡಿದ್ದೆ, ಅವ್ರ ಮಾತು–ವಿಚಾರ ನೋಡುದ್ರೆ ಈ ಮಟ್ಟಕ್ಕೆ ಇಳಿಯುತ್ತಾರೆ ಎಂದು ಭಾವಿಸಿರಲಿಲ್ಲ ಎಂದು ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಬೇರೆ ಯಾರು ಒಪ್ಪೋದು ಬೇಡ, ಆತ್ಮಸಾಕ್ಷಿ ಹೇಳುದ್ರೆ ಸಾಕು, 100 ಬಿಜೆಪಿ ನಾಯಕರೇ ನನಗೆ ಹೇಳಿದ್ದಾರೆ, ಮಾತನಾಡಬಾರದಿತ್ತು ಎಂದ, ಕ್ಷಮೆ ಕೇಳ್ತೀನಿ ಅಂತ ಕೇಳುದ್ರೆ ಮುಗಿದುಹೋಯ್ತು, ಸುಳ್ಳಿಗೆ ಸುಳ್ಳು, ಸುಳ್ಳಿಗೆ ಸುಳ್ಳು ಹೇಳಿಕೊಂಡು ಹೋದ್ರೆ ಕೊನೆ ಇಲ್ಲ ಎಂದರು.
ಅವರ ಹತ್ರ ತನಿಖೆ ತಂಡ ಇದ್ಯಲ್ಲಾ… ತನಿಖೆ ಮಾಡಿಸಿಕೊಳ್ಳಲಿ ಎಂದು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಡಿಕೆಶಿ ಹೇಳಿಕೆ ನೀಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: