ಇಸ್ರೇಲ್ ಪ್ರಧಾನಿ ನೆತನ್ಯಾಹು & ಅಮೆರಿಕದ ಚುನಾಯಿತ ಅಧ್ಯಕ್ಷ ಟ್ರಂಪ್ ನಡುವೆ ವೈಮನಸ್ಸು? ಮುಂದೇನು?
ಇಸ್ರೇಲ್ ಪ್ರಧಾನಿ ನೆತನ್ಯಾಹು ಮತ್ತು ಅಮೆರಿಕದ ಚುನಾಯಿತ ಅಧ್ಯಕ್ಷ ಟ್ರಂಪ್ ನಡುವೆ ಎಲ್ಲವೂ ಸರಿ ಇಲ್ಲ ಎಂದು ವರದಿಯಾಗಿದೆ. ಟ್ರಂಪ್ ಅವರ ಪ್ರತಿಜ್ಞಾ ಸಮಾರಂಭಕ್ಕೆ ನೆತನ್ಯಾಹು ಅವರಿಗೆ ಆಹ್ವಾನ ನೀಡಲಾಗಿಲ್ಲ ಎಂದು ಮಾತ್ರವಲ್ಲ ಅವರನ್ನು ತೀವ್ರವಾಗಿ ವಿರೋಧಿಸುವ ವಿಡಿಯೋವನ್ನು ದಿನಗಳ ಹಿಂದೆ ಟ್ರಂಪ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವುದು ಕೂಡ ಈ ಬಗೆಯ ಊಹಾಪೋಹಕ್ಕೆ ಕಾರಣವಾಗಿದೆ.
ಜನವರಿ 20ರಂದು ಟ್ರಂಪ್ ಅವರ ಪ್ರಮಾಣವಚನ ಸಮಾರಂಭ ನಡೆಯಲಿದೆ. ಆದರೆ ಈವರೆಗೆ ನೆತಾನ್ಯಾಹು ಅವರಿಗೆ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ಬಂದಿಲ್ಲ ಎಂದು ಅವರ ಆಪ್ತರು ಟೈಮ್ಸ್ ಆಫ್ ಇಸ್ರೇಲ್ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ನೆತಾನ್ಯಾಹು ಅವರು ಶಸ್ತ್ರ ಚಿಕಿತ್ಸೆ ಒಳಗ ಒಳಗಾಗಿದ್ದರು.
ಇದೇ ವೇಳೆ ಪ್ರಮಾಣವಚನ ಕಾರ್ಯಕ್ರಮದಲ್ಲಿ ನೆತನ್ಯಾಹು ಉದ್ದೇಶಪೂರ್ವಕವಾಗಿ ಭಾಗವಹಿಸದೆ ಇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಯಾಕೆಂದರೆ ಅವರ ವಿರುದ್ಧ ಅಂತರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಅರೆಸ್ಟ್ ವಾರಂಟ್ ಇದೆ. ಅವರನ್ನು ಅಮೆರಿಕ ಬಂಧಿಸುವುದಿಲ್ಲ ಎಂದು ಹೇಳಿದ್ದರೂ ಒಂದು ವೇಳೆ ಪ್ರಯಾಣದ ವೇಳೆ ಬೇರೆ ಯಾವುದಾದರೂ ರಾಷ್ಟ್ರದಲ್ಲಿ ವಿಮಾನ ತುರ್ತು ಭೂ ಸ್ಪರ್ಶ ಮಾಡಬೇಕಾಗಿ ಬಂದರೆ ಆಗ ತನ್ನ ಬಂಧನ ನಡೆಯಬಹುದೋ ಅನ್ನುವ ಭೀತಿ ಅವರಿಗಿದೆ ಎಂದು ಹೇಳಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj