ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ. ವಿದ್ಯಾರ್ಥಿಯ ದಾರುಣ ಸಾವು
ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.
ಎಸ್.ಶ್ರೇಯಸ್ ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಶ್ರೇಯಸ್ ಮೈಸೂರಿನ ನಾಗನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಪಾಲಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿ.ಇ. ಓದುತ್ತಿದ್ದ. ತನ್ನ ಮೂವರು ಸ್ನೇಹಿತರ ಜೊತೆಗೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಈಜಲು ಬಾರದ ಹಿನ್ನೆಲೆ ಸ್ನೇಹಿತರು ನದಿ ದಡದಲ್ಲಿಯೇ ಕುಳಿತಿದ್ದರು. ಈಜು ಬರುತ್ತಿದ್ದರಿಂದಾಗಿ ಶ್ರೇಯಸ್ ನದಿಗಿಳಿದಿದ್ದ. ಆದರೆ ನೀರಿನ ಸುಳಿಗೆ ಸಿಲುಕಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಘಟನೆ ಸಂಬಂಧ ಕೆಆರ್ ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7