ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚೂರಿ ಇರಿತ: ರಾತ್ರಿ ವೇಳೆ ಮನೆಗೆ ನುಗ್ಗಿ ದುಷ್ಕರ್ಮಿಗಳಿಂದ ಕೃತ್ಯ

16/01/2025
ಮುಂಬೈ: ಮನೆಗೆ ನುಗ್ಗಿ ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ದಾಳಿ ನಡೆಸಿದ ಘಟನೆ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡ ನಟನನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿಖಾನ್ ಅವರ ಮನೆಗೆ ತಡರಾತ್ರಿ 2 ಗಂಟೆಯ ಸುಮಾರಿಗೆ ದರೋಡೆ ಮಾಡಲು ಬಂದಿದ್ದ ತಂಡ ಚಾಕುವಿನಿಂದ ಇರಿದಿದೆ ಎಂದು ತಿಳಿದು ಬಂದಿದೆ. ನಟನಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಟ ನಿವಾಸಕ್ಕೆ ಭೇಟಿ ನೀಡಿರುವ ಮುಂಬೈ ಪೊಲೀಸರು, ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಸೈಫ್ ಅಲಿಖಾನ್ ಪತ್ನಿ ಕರೀನಾ ಕಪೂರ್ ಮತ್ತು ಇಬ್ಬರು ಮಕ್ಕಳು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: