5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಮೇಲೆ ಫೈರಿಂಗ್!

ಬಳ್ಳಾರಿ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬಳ್ಳಾರಿಯ ತೋರಣಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಕಮಲಾಪುರದ ಹಳೆಬೀಡು ನಿವಾಸಿ ಮಂಜುನಾಥ್ (26) ಎಂಬಾತ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ. ಈ ಪ್ರಕರಣವನ್ನು ಭೇದಿಸಲು ಬಳ್ಳಾರಿ ಎಸ್ ಪಿ ಡಾ.ಶೋಭಾರಾಣಿ 3 ತಂಡ ರಚನೆ ಮಾಡಿದ್ದರು.
ಆರೋಪಿಗಾಗಿ ಶೋಧ ನಡೆಸಿದ್ದ ಪೊಲೀಸರು ಕೊಪ್ಪಳದ ಹುಲಗಿಯಲ್ಲಿ ಆರೋಪಿ ಮಂಜುನಾಥನನನ್ನು ಬಂಧಿಸಿದ್ದರು. ಬಂಧನದ ಬಳಿಕ ಪಂಚನಾಮೆಗೆ ಕರೆದೊಯ್ದಾಗ ಆರೋಪಿಯು ಹೆಡ್ ಕಾನ್ಸ್ ಸ್ಟೇಬಲ್ ರಘುಪತಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.
ಈ ವೇಳೆಮಂಜುನಾಥನ ಮೇಲೆ ತೋರಣಗಲ್ ಪಿಎಸ್ ಐ ಡಾಕೇಶ್ ಬಲಗಾಲಿಗೆ ಫೈರಿಂಗ್ ಮಾಡಿದ್ದಾರೆ. ಸದ್ಯ ಆರೋಪಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಅತ್ಯಾಚಾರಕ್ಕೊಳಗಾಗಿದ್ದ ಮಗುವಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಮಗು ಅಪಾಯದಿಂದ ಪಾರಾಗಿದೆ ಎಂದು ಬಳ್ಳಾರಿ ಎಸ್ ಪಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7