ಯುಕೋ ಬ್ಯಾಂಕ್ ನಲ್ಲಿ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ - Mahanayaka
7:37 PM Saturday 22 - February 2025

ಯುಕೋ ಬ್ಯಾಂಕ್ ನಲ್ಲಿ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ

uco bank
18/01/2025

UCO Bank Local Bank Officer Recruitment 2025 —   ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವಂತಹ ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್, ಕೊಲ್ಕತ್ತಾದಲ್ಲಿ ಪ್ರಧಾನ ಕಚೇರಿ ಹೊಂದಿದೆ.

ಇಂತಹ ಈ ಒಂದು ಪ್ರತಿಷ್ಟಿತ ಬ್ಯಾಂಕ್ ನಲ್ಲಿ ದೇಶಾದ್ಯಂತ 11 ರಾಜ್ಯಗಳಲ್ಲಿ ಖಾಲಿ ಇರುವ 250 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತು ಪ್ರಮುಖ ಮಾಹಿತಿ ಇಲ್ಲಿದೆ..

ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳ ವಿವರ :

ಒಟ್ಟು 250 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಇದರಲ್ಲಿ ಒಟ್ಟು 35 ಹುದ್ದೆಗಳನ್ನು ಕರ್ನಾಟಕ ರಾಜ್ಯಕ್ಕೆ ಮಿಸಲಿಡಲಾಗಿದೆ.

ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳು :

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 01 ಜನವರಿ 2025ಕ್ಕೆ ಅಥವಾ ಇದರ ಮುಂಚಿತವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಒಂದು ವಿಷಯದಲ್ಲಿ ಪದವಿ ಮುಗಿಸಿರಬೇಕು.

ವೇತನ ಶ್ರೇಣಿ — ರೂ. 48,480 ರಿಂದ ರೂ. 85,920ರವರೆಗೆ

ವಯೋಮಿತಿ ಅರ್ಹತೆ — ಕನಿಷ್ಠ 20 ವರ್ಷ ಹಾಗೂ ಗರಿಷ್ಟ 30 ವರ್ಷದ ಒಳಗಿರಬೇಕು. ಒಂದು ವೇಳೆ ನೀವು ಮೀಸಲಾತಿ ವರ್ಗಕ್ಕೆ ಸೇರಿದವರಾಗಿದ್ದಾರೆ ನಿಮಗೆ ಗರಿಷ್ಟ ವಯೋಮಿತಿಯಲ್ಲಿ ಮೀಸಲಾತಿ ಸಿಗಲಿದೆ.

ನಿಗದಿತ ಅರ್ಜಿ ಶುಲ್ಕವೆಷ್ಟು ?

* ಪ. ಜಾತಿ, ಪ. ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 175ರೂ.

* ಉಳಿದ ವರ್ಗದವರಿಗೆ 850ರೂ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 05ನೇ ಫೆಬ್ರವರಿ 2025 ಕೊನೆಯ ದಿನಾಂಕವಾಗಿರುತ್ತದೆ. ಆದ್ದರಿಂದ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈ ದಿನಾಂಕದ ಒಳಗಾಗಿಯೇ ಅರ್ಜಿ ಸಲ್ಲಿಸಿರಿ.

ಅರ್ಜಿ ಸಲ್ಲಿಸಲಿಕ್ಕೆ ಡೈರೆಕ್ಟ್ ಲಿಂಕ್ — https://ucobank.com/en/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ