ಕಲ್ಲಿದ್ದಲು ಇಲಾಖೆಯಲ್ಲಿ ಭರ್ಜರಿ ನೇಮಕಾತಿ : ವೇತನ 1.8 ಲಕ್ಷ ರೂ. ವರೆಗೆ
Coal India Recruitment 2025 — ಕೋಲ್ ಇಂಡಿಯಾ ಕಂಪನಿಯಲ್ಲಿ ಖಾಲಿ ಇರುವಂತಹ 400ಕ್ಕೂ ಅಧಿಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಕಲ್ಲಿದ್ದಲು ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ವಲಯದ ಮಹಾರತ್ನ ಕಂಪನಿಯಲ್ಲಿ ಒಂದಾದ ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಈ ನೇಮಕಾತಿ ನಡೆಯುತ್ತಿದೆ.
ಹುದ್ದೆಗಳ ಮಾಹಿತಿ :
ಈ ನೇಮಕಾತಿಯಲ್ಲಿ ವಿವಿಧ ವಿಭಾಗಗಳ ಒಟ್ಟು 434 ವಿವಿಧ ಹುದ್ದೆಗಳನ್ನು ಇಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ವಿಭಾಗವಾರು ಹುದ್ದೆಗಳ ವಿವರವು ಹೀಗಿದೆ..
ಸೆಕ್ಯೂರಿಟಿ -– 31 ಹುದ್ದೆಗಳು
ಕೋಲ್ ಪ್ರೆಪರಶನ್ -– 68 ಹುದ್ದೆಗಳು
ಮಾರ್ಕೆಟಿಂಗ್ & ಸೇಲ್ಸ್ -– 25 ಹುದ್ದೆಗಳು
ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್ -– 44 ಹುದ್ದೆಗಳು
ಪರ್ಸ್ನಲ್ & HR -– 97 ಹುದ್ದೆಗಳು
ಕಮ್ಯೂನಿಟಿ ಡೆವಲಪ್ಮೆಂಟ್- – 20 ಹುದ್ದೆಗಳು
ಎನ್ವಿರಾನ್ಮೆಂಟ್ -– 28 ಹುದ್ದೆಗಳು
ಫೈನಾನ್ಸ್ -– 03 ಹುದ್ದೆಗಳು
ಲೀಗಲ್- – 18 ಹುದ್ದೆಗಳು
ಶೈಕ್ಷಣಿಕ ಅರ್ಹತೆಗಳು : ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ — ಗರಿಷ್ಟ 30 ವರ್ಷದ ಒಳಗಿರಬೇಕು. ಒಂದು ವೇಳೆ ಮೀಸಲಾತಿ ವರ್ಗದವರಾಗಿದ್ದರೆ ನಿಮಗೆ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಸಂಬಳ ಏಷ್ಟಿರಲಿದೆ?
ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಆಗುವಂತಹ ಅಭ್ಯರ್ಥಿಗಳಿಗೆ ಮಾಸಿಕ ಸಂಭಳ ಅಭ್ಯರ್ಥಿಗಳು ಆಯ್ಕೆಯಾಗುವ ಹುದ್ದೆಗಳಿಗೆ ಅನುಗುಣವಾಗಿ 50,000ರೂ. ನಿಂದ 1.8ಲಕ್ಷ ರೂ. ಒಳಗೆ ಇರುತ್ತದೆ.
ಅರ್ಜಿ ಶುಲ್ಕ ಎಷ್ಟು?
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದ್ದು, ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ 14ನೇ ಫೆಬ್ರವರಿ 2025 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್: https://cdn.digialm.com/EForms/configuredHtml/1258/92240/Index.html
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: