ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ವೈದ್ಯ: ₹ 5,000 ದಂಡ ಹಾಕಿ ಬಿಸಿ ಮುಟ್ಟಿಸಿದ ಪೊಲೀಸರು

ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇರಳದ ವೈದ್ಯರೋರ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಣ್ಣೂರು ಜಿಲ್ಲೆಯ ತಲಶೇರಿ ಪ್ರದೇಶದಲ್ಲಿ ಜನವರಿ 16 ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ವೈದ್ಯರಿಗೆ 5,000 ರೂ.ಗಳ ದಂಡ ವಿಧಿಸಲಾಗಿದೆ.
ಪೊಲೀಸರ ಪ್ರಕಾರ, ಆಂಬ್ಯುಲೆನ್ಸ್ ನಾಯನಾರ್ ರಸ್ತೆಯ ಮೂಲಕ ಆಸ್ಪತ್ರೆಗೆ ಹೋಗುತ್ತಿದ್ದಾಗ ದಾರಿ ಬಿಡುವಂತೆ ಪದೇ ಪದೇ ಸೈರನ್ ಮಾಡಿದರೂ ವೈದ್ಯನ ಕಾರು ಸೈಡ್ ಕೊಟ್ಟಿಲ್ಲ.
ಇರಿಟ್ಟಿಯಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿರುವ ವೈದ್ಯ ರಾಹುಲ್ ರಾಜ್ ಈ ಕಾರನ್ನು ಚಲಾಯಿಸುತ್ತಿದ್ದರು.
ಈ ಕುರಿತು ಕಥಿರೂರ್ ಪೊಲೀಸರಿಗೆ ದೂರು ನೀಡಿದ ಆಂಬ್ಯುಲೆನ್ಸ್ ಚಾಲಕ, ಅಡಚಣೆಯಿಂದ ಆಂಬ್ಯುಲೆನ್ಸ್ ಪ್ರಯಾಣಕ್ಕೆ ತಡೆಯುಂಟಾಯಿತು. ರೋಗಿಯ ಜೀವಕ್ಕೆ ಅಪಾಯವನ್ನುಂಟು ಮಾಡಿದೆ ಎಂದು ಆರೋಪಿಸಿದ್ದಾರೆ.
ಈ ದೂರಿನ ಅನ್ವಯ ಪೊಲೀಸರು ರಾಹುಲ್ ರಾಜ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ನ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸ್ ಪ್ರಕರಣದ ಜೊತೆಗೆ, ಮೋಟಾರು ವಾಹನ ಇಲಾಖೆ ವೈದ್ಯರಿಗೆ 5,000 ರೂ.ಗಳ ದಂಡವನ್ನು ವಿಧಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj