ಸೈಫ್ ಅಲಿ ಖಾನ್ ಮೇಲಿನ ಹಲ್ಲೆ ಕೇಸ್: ಪೊಲೀಸರಿಂದ ಕೃತ್ಯದ ದೃಶ್ಯವನ್ನು ಮರುಸೃಷ್ಟಿಸಲು ನಿರ್ಧಾರ - Mahanayaka

ಸೈಫ್ ಅಲಿ ಖಾನ್ ಮೇಲಿನ ಹಲ್ಲೆ ಕೇಸ್: ಪೊಲೀಸರಿಂದ ಕೃತ್ಯದ ದೃಶ್ಯವನ್ನು ಮರುಸೃಷ್ಟಿಸಲು ನಿರ್ಧಾರ

20/01/2025

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ನಿವಾಸದಲ್ಲಿ ನಡೆದ ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ಮುಂಬೈ ಪೊಲೀಸರು ನಿರ್ಧರಿಸಿದ್ದಾರೆ.

ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಲಾಗಿದ್ದು, ನ್ಯಾಯಾಲಯವು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಸ್ತುತ ಅವರನ್ನು ಬಾಂದ್ರಾ ಪೊಲೀಸ್ ಠಾಣೆಯ ಲಾಕಪ್‌ನಲ್ಲಿ ಇರಿಸಲಾಗಿದೆ.

ಥಾಣೆಯ ಹೌಸ್ ಕೀಪಿಂಗ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಶೆಹಜಾದ್ ನನ್ನು ಜನವರಿ 20 ರಂದು ಹಿರಾನಂದಾನಿ ಎಸ್ಟೇಟ್ ನ ಮೆಟ್ರೋ ನಿರ್ಮಾಣ ಸ್ಥಳದ ಬಳಿಯ ಕಾರ್ಮಿಕ ಶಿಬಿರದಲ್ಲಿ ಬಂಧಿಸಲಾಗಿತ್ತು.


Provided by

ತನಿಖೆಯ ಭಾಗವಾಗಿ ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ಮುಂದಿನ ಐದು ದಿನಗಳಲ್ಲಿ ಶೆಹಜಾದ್ ಅವರನ್ನು ‘ಸದ್ಗುರು ಶರಣ್’ ಕಟ್ಟಡದಲ್ಲಿರುವ ಸೈಫ್ ಅವರ ಮನೆಗೆ ಕರೆದೊಯ್ಯಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ