ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಚಿನ್ನಾಭರಣ ದರೋಡೆ

ಬೆಂಗಳೂರು: ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆಸಿದ ದುಷ್ಕರ್ಮಿಗಳು ಮೊಬೈಲ್, ಹಣ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ಬೆಂಗಳೂರು ಕೇಂದ್ರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ತಮಿಳುನಾಡಿನಿಂದ ಬೆಂಗಳೂರಿನ ತನ್ನ ಅಣ್ಣನ ಮನೆಗೆ ಬರುತ್ತಿದ್ದರು. ಕೆ.ಆರ್.ಮಾರುಕಟ್ಟೆಯಲ್ಲಿ ಬಸ್ಸಿಗೆ ಕಾಯುತ್ತಿದ್ದ ವೇಳೆ ಬಸ್ಸಿನ ಮಾಹಿತಿ ತಿಳಿಯದೇ ಆರೋಪಿಗಳ ಬಳಿಕ ವಿಚಾರಿಸಿದ್ದಾರೆ.
ಈ ವೇಳೆ ಆರೋಪಿಗಳು ಬಸ್ ತೋರಿಸುವುದಾಗಿ ಕರೆದೊಯ್ದು, ಗೋಡಾನ್ ಸ್ಟ್ರೀಟ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ರಾತ್ರಿ 11:30ರ ಸುಮಾರಿಗೆ ದೌರ್ಜನ್ಯ ನಡೆಸಲಾಗಿದೆ. ಬಳಿಕ ಆಕೆಯ ಬಳಿಯಿದ್ದ ಮೊಬೈಲ್, ಹಣ, ತಾಳಿ, ಚಿನ್ನ ಕದ್ದು ಪರಾರಿಯಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯು ಬೆಂಗಳೂರು ಕೇಂದ್ರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾಳೆ. ಘಟನೆ ಸಂಬಂಧ ಪೊಲೀಸರು ಎರಡು ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx