ಗರಿಯಾಬಂದ್ ನಲ್ಲಿ ನಡೆಯಿತು ಎನ್ ಕೌಂಟರ್: 14 ಮಾವೋವಾದಿಗಳ ಸಾವು

ಛತ್ತೀಸ್ ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ ನಲ್ಲಿ ಆರು ಮಹಿಳೆಯರು ಸೇರಿದಂತೆ ಕನಿಷ್ಠ 14 ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಮಾವೋವಾದಿಗಳ ಎಲ್ಲಾ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವಿನ ಎನ್ ಕೌಂಟರ್ ಬಗ್ಗೆ ಮಾಹಿತಿ ನೀಡಿದ ರಾಯ್ಪುರ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ (ಐಜಿಪಿ) ಅಮರೇಶ್ ಕುಮಾರ್ ಮಿಶ್ರಾ, ಗರಿಯಾಬಂದ್ ಜಿಲ್ಲೆಯ ಕುಲ್ಹಾರಿ ಘಾಟ್ ನಲ್ಲಿರುವ ಭಾಲು-ಡಿಗ್ಗಿಯ ದಟ್ಟ ಕಾಡುಗಳಲ್ಲಿ ಈ ಎನ್ಕೌಂಟರ್ ನಡೆದಿದ್ದು, ಇದು ಜನವರಿ 19 ರ ರಾತ್ರಿ ಪ್ರಾರಂಭವಾಯಿತು ಮತ್ತು ಇನ್ನೂ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಯಿತು. ಕಳೆದ ಎರಡು ದಿನಗಳಲ್ಲಿ 14 ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಇದಲ್ಲದೆ, ಶೋಧ ಕಾರ್ಯಾಚರಣೆಯ ಸಮಯದಲ್ಲಿ ಐಎನ್ಎಸ್ಎಎಸ್ ರೈಫಲ್, ಎಸ್ಎಲ್ಆರ್, ರಿವಾಲ್ವರ್ ಮತ್ತು ಕಾರ್ಟ್ರಿಡ್ಜ್ಗಳು ಸೇರಿದಂತೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಇತರ ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ” ಎಂದು ರಾಯ್ಪುರ ಐಜಿಪಿ ಸುದ್ದಿ ಸಂಸ್ಥೆ ಐಎಎನ್ಎಸ್ ಗೆ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj