ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿ: 10 ಮಂದಿ ಸಾವು, 16 ಮಂದಿಗೆ ಗಾಯ
ಉತ್ತರ ಕನ್ನಡ: ಕುಮಟಾ ಸಂತೆಗೆ ಹಣ್ಣು ಹಾಗೂ ತರಕಾರಿ ಹೊತ್ತು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ 10 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, 10 ಮಂದಿ ವ್ಯಾಪಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಾರಿ ಅಪಘಾತಗೊಂಡು 1 ಗಂಟೆಯ ನಂತರ ಮಾಹಿತಿ ತಿಳಿದು ಬಂದಿದೆ. ಲಾರಿಯಲ್ಲಿ ಜನರಿರುವ ಬಗ್ಗೆ ಮಾಹಿತಿ ಇರಲಿಲ್ಲ, ಕ್ರೇನ್ ತಂದು ಲಾರಿ ಮೇಲೆತ್ತಿದ ವೇಳೆ ಲಾರಿಯಲ್ಲಿ ಜನ ಇದ್ದರು ಎನ್ನುವ ಬಗ್ಗೆ ತಿಳಿದು ಬಂದಿತ್ತು. ಅದಾಗಲೇ 9 ಜನರು ಉಸಿರುಗಟ್ಟಿ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಒಟ್ಟು 10 ಜನರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: