ನಟ ದರ್ಶನ್ ಕೇಸ್: ಸುಪ್ರೀಂ ಕೋರ್ಟ್ ತೀರ್ಪು ನೋಡಿ ಮುಂದಿನ ನಿರ್ಧಾರ: ಸಚಿವ ಪರಮೇಶ್ವರ್
ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪು ನೋಡಿಕೊಂಡು ನಟ ದರ್ಶನ್ ಜಾಮೀನು ಕೇಸ್ ನಲ್ಲಿ ಮುಂದಿನ ನಿರ್ಧಾರ ಮಾಡ್ತೀವಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಕೇಸ್ ವಿಚಾರಣೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಲ್ಲಿ ಏನು ತೀರ್ಪು ಬರುತ್ತೆ ನೋಡೋಣ, ನಮ್ಮ ಕೆಲಸ ನಾವು ಮಾಡಿದ್ದೇವೆ. ಪೊಲೀಸರು ದಾಖಲಾತಿಗಳ ಮಾಹಿತಿಗಳನ್ನು ಲಾಯರ್ ಮೂಲಕ ಸುಪ್ರೀಂ ಕೋರ್ಟ್ ಗೆ ಕೊಟ್ಟಿದ್ದಾರೆ. ಕೋರ್ಟ್ ಏನು ತೀರ್ಮಾನ ಬರುತ್ತೆ, ಆ ತೀರ್ಮಾನದ ಆಧಾರದಲ್ಲಿ ಮುಂದುವರಿಯುವುದಾಗಿ ತಿಳಿಸಿದರು.
ಇನ್ನೂ ಶ್ರೀರಾಮುಲು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ಜನಾರ್ದನ ರೆಡ್ಡಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆಯಾಗುವ ವಿಚಾರದ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.
ಬಿಜೆಪಿ ಪಕ್ಷದಲ್ಲಿ ಅವೆಲ್ಲ ಗಲಾಟೆ ಆಗ್ತಿದೆ. ನಮ್ಮಲ್ಲಿ ಅದರ ಬಗ್ಗೆ ಚರ್ಚೆ ಆಗಿಲ್ಲ, ಅಂತಹ ಪ್ರಸ್ತಾಪ ಕೂಡ ನಮ್ಮಲ್ಲಿ ಆಗಿಲ್ಲ, ಸತೀಶ್ ಜಾರಕಿಹೊಳಿ ಹೆಸರು ಪ್ರಸ್ತಾಪ ಆಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: