ಕುಂಭಮೇಳ ಕಾಲ್ತುಳಿತದಲ್ಲಿ ಬೆಳಗಾವಿ ಮೂಲದ ತಾಯಿ ಮಗಳು ಸಾವು

ಬೆಳಗಾವಿ: ಉತ್ತರ ಪ್ರದೇಶ ಸರ್ಕಾರ ಭಕ್ತರಿಗೆ ಸುರಕ್ಷಿತ ವ್ಯವಸ್ಥೆಗಳನ್ನು ಕಲ್ಪಿಸದ ಹಿನ್ನೆಲೆ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ಕಾಲ್ತುಳಿತದಲ್ಲಿ ಬೆಳಗಾವಿ ಮೂಲದ ತಾಯಿ ಮಗಳು ಕೂಡ ಸಾವನ್ನಪ್ಪಿದ್ದಾರೆ.
ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ್(50), ಮೇಘಾ ಹತ್ತರವಾಠ್ ಮೃತಪಟ್ಟವರಾಗಿದ್ದಾರೆ. ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವಿಗೀಡಾಗಿದ್ದಾರೆ.
ಕಾಲ್ತುಳಿತ ಘಟನೆಯ ಬಳಿಕ ಕುಟುಂಬಸ್ಥರು ಸಾಕಷ್ಟು ಬಾರಿ ಕರೆ ಮಾಡಿದರೂ ಅವರಿಗೆ ಸಂಪರ್ಕಕ್ಕೆ ಸಿಕ್ಕಿರಲಿಲ್ಲ, ಕರೆ ರಿಸಿವ್ ಮಾಡದ ಹಿನ್ನೆಲೆ ಕುಟುಂಬಸ್ಥರು ಆತಂಕ್ಕೊಳಗಾಗಿದ್ದರು. 3 ದಿನಗಳ ಹಿಂದೆ 13 ಜನರ ತಂಡದ ಜೊತೆಗೆ ಇವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ತೆರಳಿದ್ದರು.
ಜನರು ಹೋಗಲು ಮತ್ತು ಬರಲು ಸರಿಯಾದ ವ್ಯವಸ್ಥೆಗಳಿಲ್ಲ ಎನ್ನುವ ಬಗ್ಗೆ ಭಕ್ತರು ಸಾಕಷ್ಟು ದೂರು ಹೇಳುತ್ತಿದ್ದಾರೆ. ಯೋಗಿ ಆದಿತ್ಯ ನೇತೃತ್ವದ ಉತ್ತರ ಪ್ರದೇಶ ಸರ್ಕಾರ, ಇಷ್ಟೊಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುವ ವೇಳೆ ಮುನ್ನೆಚ್ಚರಿಕೆ ವಹಿಸದೇ ಇರುವುದೇ ಘಟನೆಗೆ ಕಾರಣ ಎಂಬ ಆಕ್ರೋಶ ಭಕ್ತರಿಂದ ಕೇಳಿ ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: