ಬಹುಮತದೊಂದಿಗೆ ವಕ್ಫ್ ತಿದ್ದುಪಡಿ ಮಸೂದೆ ಕರಡನ್ನು ಅಂಗೀಕಾರ: ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಹೇಳಿಕೆ

ವಕ್ಫ್ ತಿದ್ದುಪಡಿ ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿಯು ಬಹುಮತದೊಂದಿಗೆ ವಕ್ಫ್ ತಿದ್ದುಪಡಿ ಮಸೂದೆ ಕರಡನ್ನು ಅಂಗೀಕರಿಸಿದೆ ಎಂದು ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಹೇಳಿದ್ದಾರೆ. ಪರಿಷ್ಕೃತ ಮಸೂದೆಯನ್ನು ಗುರುವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾರಿಗೆ ಸಲ್ಲಿಸುವ ನಿರೀಕ್ಷೆ ಇದೆ.
ಜಂಟಿ ಸಂಸದೀಯ ಸಮಿತಿಯ 16 ಸದಸ್ಯರು ಕರಡು ಮಸೂದೆ ಪರವಾಗಿ ಮತ ಚಲಾಯಿಸಿದರೆ, 11 ಸದಸ್ಯರು ವಿರೋಧವಾಗಿ ಮತವನ್ನು ಚಲಾಯಿಸಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಹೇಳಿದ್ದಾರೆ.
ಈ ಕುರಿತು ಭಿನ್ನಾಭಿಪ್ರಾಯವನ್ನು ಸಲ್ಲಿಸಲು ಬುಧವಾರ ಸಂಜೆ 4 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿತ್ತು.
ಇಲ್ಲಿಯವರೆಗೆ ತೃಣಮೂಲ ಕಾಂಗ್ರೆಸ್ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ನದೀಮುಲ್ ಹಕ್, ಡಿಎಂಕೆ ಸಂಸದ ಎ ರಾಜಾ, ಎಎಪಿ ನಾಯಕ ಸಂಜಯ್ ಸಿಂಗ್ ಮತ್ತು ಶಿವಸೇನಾ (ಯುಬಿಟಿ)ಸಂಸದ ಅರವಿಂದ್ ಸಾವಂತ್ ಅವರು ಔಪಚಾರಿಕವಾಗಿ ತಮ್ಮ ಭಿನ್ನಾಭಿಪ್ರಾಯ ಸಲ್ಲಿಸಿದ್ದಾರೆ.
ಪ್ರತಿಪಕ್ಷದ ಸದಸ್ಯರು ಜಂಟಿ ಸಂಸದೀಯ ಸಮಿತಿಯ ಪ್ರಕ್ರಿಯೆಯನ್ನು ಟೀಕಿಸಿದ್ದು, ಅಂತಿಮ ವರದಿಯನ್ನು ಪರಿಶೀಲಿಸಲು ಅಲ್ಪ ಅವಧಿಯನ್ನು ಮಾತ್ರ ನೀಡಲಾಗಿದೆ. ಈ ಪ್ರಕ್ರಿಯೆಯು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಈ ಕುರಿತು ವಿರೋಧ ಪಕ್ಷದ ಸಂಸದರು ಭಿನ್ನಾಭಿಪ್ರಾಯ ಸಲ್ಲಿಸಲಿದ್ದಾರೆ ಎಂದು ಶಿವಸೇನಾ ಸಂಸದ ಅರವಿಂದ್ ಸಾವಂತ್ ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj