ಗೋವಿಂದ ಪನ್ಸಾರೆ ಹತ್ಯೆ ಪ್ರಕರಣ: 6 ಆರೋಪಿಗಳಿಗೆ ಬಾಂಬೆ ಹೈಕೋರ್ಟ್ ನಿಂದ ಜಾಮೀನು

2015ರಲ್ಲಿ ನಡೆದಿದ್ದ ಲೇಖಕ ಹಾಗೂ ಕಮ್ಯುನಿಸ್ಟ್ ನಾಯಕ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣದ ಆರು ಆರೋಪಿಗಳಿಗೆ ಬಾಂಬೆ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ.
ನ್ಯಾಯಾಲಯವು ಪ್ರಮುಖ ಆರೋಪಿ ವೀರೇಂದ್ರಸಿನ್ಹ ತಾವ್ಡೆ ಅವರ ಜಾಮೀನು ಅರ್ಜಿಯನ್ನು ಮರು ವಿಚಾರಣೆಗೆ ಮುಂದೂಡಿದೆ. ನ್ಯಾಯಮೂರ್ತಿ ಅನಿಲ್ ಕಿಲೋರ್ ಅವರು ತಾವ್ಡೆ ಅವರ ಪ್ರಕರಣವನ್ನು ಹೆಚ್ಚಿನ ಪರಿಶೀಲನೆಗಾಗಿ ಸೂಕ್ತ ನ್ಯಾಯಪೀಠದ ಮುಂದೆ ಇಡುವಂತೆ ನಿರ್ದೇಶನ ನೀಡಿದ್ದಾರೆ.
ಸಚಿನ್ ಅಂಡೂರೆ, ಗಣೇಶ್ ಮಿಸ್ಕಿನ್, ಅಮಿತ್ ದೆಗ್ವೇಕರ್, ಅಮಿತ್ ಬದ್ದಿ, ಭರತ್ ಕುರಾನೆ ಮತ್ತು ವಾಸುದೇವ್ ಸೂರ್ಯವಂಶಿ ಅವರಿಗೆ ಜಾಮೀನು ನೀಡಲಾಗಿದೆ. ಅವರ ಜಾಮೀನು ಅರ್ಜಿಗಳನ್ನು ಪ್ರಾಸಿಕ್ಯೂಷನ್ ವಿರೋಧಿಸಿತತ್ತು. ಆದ್ರೆ ನಡೆಯುತ್ತಿರುವ ವಿಚಾರಣೆಯಲ್ಲಿ ಸಾಕ್ಷಿಗಳ ಹೇಳಿಕೆಗಳು ಒಂಬತ್ತು ತಿಂಗಳಲ್ಲಿ ಪೂರ್ಣಗೊಳ್ಳುತ್ತವೆ ಎಂದು ವಾದಿಸಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj