12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ: ಕೇಂದ್ರ ಬಜೆಟ್ ನಲ್ಲಿ ಘೋಷಣೆ

ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ಆದಾಯ ತೆರಿಗೆದಾರರಿಗೆ ಬಂಪರ್ ಆಫರ್ ನೀಡಲಾಗಿದೆ. 12 ಲಕ್ಷದವರೆಗೆ ಸಂಪೂರ್ಣ ತೆರಿಗೆಯಲ್ಲಿ ಡೊಡ್ಡ ವಿನಾಯತಿ ನೀಡಲಾಗಿದೆ.
ಆದಾಯ ತೆರಿಗೆ ವಿನಾಯಿತಿ ಮಿತಿ 12 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ, 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ, 8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು ತೆರಿಗೆ, 12 ಲಕ್ಷದಿಂದ 15 ಲಕ್ಷದವರೆಗೆ ಶೇ.15ರಷ್ಟು ತೆರಿಗೆ, 15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು ತೆರಿಗೆ, 20 ಲಕ್ಷದಿಂದ 24 ಲಕ್ಷದರೆಗೆ ಶೇ.25ರಷ್ಟು ತೆರಿಗೆ, 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ವಿಧಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: