ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿದ್ದ ಬಿಜೆಪಿ ಮುಖಂಡನ ಮನೆ ಧ್ವಂಸ - Mahanayaka

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿದ್ದ ಬಿಜೆಪಿ ಮುಖಂಡನ ಮನೆ ಧ್ವಂಸ

bjp
06/02/2025

ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯ ಆವರಣದಲ್ಲಿದ್ದ ಬಿಜೆಪಿ ಕಾರ್ಯಾಧ್ಯಕ್ಷ ಮತ್ತು ಮಾಜಿ ಪರಿಷತ್ ಸದಸ್ಯ ರಾಜೇಶ್ ಬನ್ನೂರು ಅವರ ಮನೆಯನ್ನು ಧ್ವಂಸಗೊಳಿಸಲಾಗಿದ್ದು, ಈ ಘಟನೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ.

ನಿನ್ನೆ ತಡರಾತ್ರಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ನೆಲಸಮ ಮಾಡಲಾಗಿದೆ. ಮುಸುಕು ಧಾರಿಗಳು ಓಮ್ನಿ ಕಾರಿನಲ್ಲಿ ಬಂದು ನೆಲಸಮ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವೇಳೆ ಮನೆಯಲ್ಲಿದ್ದ ನಾಯಿ ಮರಿ ಮಣ್ಣಿನಡಿ ಸಿಲುಕಿ ಸಾವನಪ್ಪಿದ್ದು, ಅಲ್ಲದೆ 32 ಗ್ರಾಂ ಚಿನ್ನ, ದಾಖಲೆ ಪತ್ರ, ಹಣಗಳನ್ನೆಲ್ಲ ಮುಸುಧಾರಿಗಳು ದೋಚಿದ್ದಾರೆ ಎಂದು ಆರೋಪಿಸಲಾಗಿದೆ.


Provided by

ಘಟನೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಪುತ್ತೂರು ನಗರ ಪೋಲಿಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು. ಅಲ್ಲದೆ. ದರೋಡೆ ಪ್ರಕರಣ ದಾಖಲಿಸುವಂತೆ ಪಟ್ಟು ಹಿಡಿದಿದ್ದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಕೂಡ ನಡೆದಿತ್ತು.
ಘಟನೆ ಹಿನ್ನೆಲೆ ಪೊಲೀಸ್ ಠಾಣೆಗೆ ಆಗಮಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ಯಾವುದೇ ಸೂಚನೆ ನೀಡದೇ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಳಿಸಿದವರ ಮೇಲೆ ಕೇಸ್ ಹಾಕುವಂತೆ ಒತ್ತಾಯಿಸಿದರು.

ಕೊನೇ ಕ್ಷಣದಲ್ಲಿ ಪುತ್ತೂರು ನಗರಠಾಣಾ ಪೊಲೀಸರು ಪುತ್ತೂರು ಮಹಾಲಿಂಗೇಶ್ವರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ, ಟ್ರಸ್ಟಿ ವಿನಯ ಸುವರ್ಣ ಮತ್ತು ಇತರರ ಮೇಲೆ ಕೇಸ್ ದಾಖಲಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಪುತ್ತೂರು ಶಾಸಕ ಅಶೋಕ್ ರೈ, ಮನೆ ಧ್ವಂಸದಲ್ಲಿ ದೇವಾಲಯ ಆಡಳಿತ ಮಂಡಳಿಯ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜೇಶ್ ಬನ್ನೂರು ಅವರಲ್ಲಿ ಜಾಗದ ಹಕ್ಕುಪತ್ರ, ದಾಖಲೆಗಳಿದ್ದರೆ ಕೋರ್ಟಿಗೆ ಹೋಗಲಿ.

ಈಗಲೂ ಹೋಗಿ ಸ್ಟೇ ತರಬಹುದು. 50–60 ವರ್ಷಗಳ ಹಿಂದೆ ಅವರ ಪೂರ್ವಜರಿಗೆ ಜಾಗ ಕೊಟ್ಟಿದ್ದು ಇರಬಹುದು. 30–40 ವರ್ಷಗಳಲ್ಲಿ ಏಳೆಂಟು ಕಟ್ಟಡಗಳಲ್ಲಿದ್ದವರು ಬಾಡಿಗೆ ಕೊಟ್ಟು ಸಂಪಾದನೆ ಮಾಡಿದ್ದಾರೆ. ಕೇಸು ಮಾಡಿದವರೂ ಈಗ ಜಾಗ ದೇವಸ್ಥಾನಕ್ಕೆ ಬಿಟ್ಟುಕೊಟ್ಟಿದ್ದಾರೆ. ಬಿಜೆಪಿಯವರು ಯಾವ ಮುಖ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಾರೆ.

ಅವರ ಹಿಂದುತ್ವ ಎಂಥದ್ದು ಅಂತ ಎಲ್ಲರಿಗೂ ಗೊತ್ತಿದೆ. ಅವರಿಗಂತೂ ಅಭಿವೃದ್ಧಿ ಕೆಲಸ ಮಾಡಲು ಆಗಿಲ್ಲ. ಈಗ ಯಾಕೆ ಅಡ್ಡಿ ಬರುತ್ತಿದ್ದಾರೆ, ಪುತ್ತೂರಿನ ಜನತೆ ದೇವಸ್ಥಾನದ ಅಭಿವೃದ್ಧಿ ಕೆಲಸ ತಪ್ಪೆಂದು ಹೇಳಲಿ. ಇಲ್ಲಿಗೇ ಕೆಲಸ ನಿಲ್ಲಿಸುತ್ತೇವೆ ಎಂದು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

 

ಇತ್ತೀಚಿನ ಸುದ್ದಿ