ಮನೆಯಲ್ಲಿ ಒಬ್ಬಂಟಿಯಾಗಿದ್ದ ಬುದ್ಧಿಮಾಂದ್ಯ ಬಾಲಕಿ ಮೇಲೆ ಪಕ್ಕದ ಮನೆಯವನಿಂದಲೇ ಅತ್ಯಾಚಾರ!
ಹಾಸನ: ಅಪ್ರಾಪ್ತ ಬುದ್ಧಿಮಾಂದ್ಯೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಹಾಸನ ಜಿಲ್ಲೆಯ ಹಳೆಬೀಡು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
ಮಂಗಳವಾರ ಬಾಲಕಿಯ ಮನೆಯವರು ಸಂಬಂಧಿಕರ ಬೀಗರ ಔತಣ ಕೂಟಕ್ಕೆ ಹೋಗಿದ್ದರು. ಈ ವೇಳೆ ಬುದ್ಧಿಮಾಂದ್ಯ ಬಾಲಕಿಯನ್ನು ಒಬ್ಬಂಟಿಯಾಗಿ ಮನೆಯಲ್ಲಿ ಬಿಟ್ಟು ಹೋಗಿದ್ದಾರೆ.
ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ಕಂಡು ಆರೋಪಿಯು ಚಾಕೊಲೇಟ್ ನೀಡುವ ನೆಪದಲ್ಲಿ ಬಂದು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಔತಣಕೂಟ ಮುಗಿಸಿ ಮನೆಗೆ ಪೋಷಕರು ಬಂದ ವೇಳೆ ಬಾಲಕಿಯ ವರ್ತನೆ ಬದಲಾಗಿತ್ತು. ಒಂದೇ ಸಮನೆ ಆಕೆ ಅಳಲು ಆರಂಭಿಸಿದ್ದಳು. ಹೀಗಾಗಿ ಪೋಷಕರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ವೈದ್ಯರಿಗೆ ತೋರಿಸಿದ್ದಾರೆ. ಈ ವೇಳೆ ಅತ್ಯಾಚಾರ ನಡೆಸಿರುವುದು ಬೆಳಕಿಗೆ ಬಂದಿದೆ.
ಅತ್ಯಾಚಾರ ನಡೆಸಿರುವುದು ಪೋಷಕರಿಗೆ ತಿಳಿದ ವಿಚಾರ ತಿಳಿದು ಆರೋಪಿ ತನ್ನ ಮನೆಯ ಹಿಂಬಾಗಿಲಿನ ಮೂಲಕ ಪರಾರಿಯಾಗಿ ತಲೆಮರೆಸಿಕೊಂಡಿದ್ದಾನೆ.
ಆರೋಪಿ ಎರಡು ಮಕ್ಕಳ ತಂದೆಯಾಗಿದ್ದರೂ, ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅನಾಚಾರ ನಡೆಸಿದ್ದಾನೆ. ಸದ್ಯ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತನ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: