ಇನ್ನು ಮುಂದೆ ದ್ವೇಷ ಭಾಷಣ ಮಾಡಿದ್ರೆ 3 ವರ್ಷ ಜೈಲು ಶಿಕ್ಷೆ!
![jail](https://www.mahanayaka.in/wp-content/uploads/2021/06/jail-1.jpg)
ಬೆಂಗಳೂರು: ದ್ವೇಷ ಭಾಷಣದ ವಿರುದ್ಧ ಕಠಿಣ ಕಾನೂನು ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಇನ್ನು ಮುಂದೆ ದ್ವೇಷ ಭಾಷಣ ಮಾಡಿರೋದು ಸಾಬೀತಾದರೆ, 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.
ಈ ಮಸೂದೆಯೊಂದನ್ನು ತರಲು ಸಿದ್ಧತೆ ನಡೆಸಲಾಗಿದ್ದು, ಬಜೆಟ್ ಅಧಿಕವೇಶನದಲ್ಲಿ ಬಿಲ್ ಮಂಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ ವಿಧೇಯಕ 2025 ಕರಡನ್ನು ಕಾನೂನು ಇಲಾಖೆ ಸಿದ್ಧಪಡಿಸಿದೆ. ಜಾತಿ, ಧರ್ಮ ಆಧರಿಸಿ ದ್ವೇಷ ಭಾಷಣ ಮಾಡಿದ್ರೆ ಇನ್ನು ಮುಂದೆ ಜೈಲು ಗ್ಯಾರೆಂಟಿಯಾಗಿದೆ.
ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಅಂಗವೈಕಲ್ಯ ಬುಡಕಟ್ಟುವಿನ ಕುರಿತು ದ್ವೇಷ ಭಾಷಣ ಮಾಡುವಂತಿಲ್ಲ ಎಂಬುವುದು ಬಿಲ್ ಕರಡಿನಲ್ಲಿದ್ದು, ವಿಧಾನ ಸಭೆಯಲ್ಲಿ ಈ ಕಾನೂನು ಮಂಡನೆಯಾಗಿ ಅಂಗೀಕಾರವಾಗುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: