ಮೈಕ್ರೋ ಫೈನಾನ್ಸ್ ವಿರುದ್ಧ ಕಾನೂನು ತರುವ ನಿರ್ಧಾರಕ್ಕೆ ಹಿನ್ನಡೆ: ರಾಜ್ಯಪಾಲರಿಂದ ಸುಗ್ರೀವಾಜ್ಞೆ ತಿರಸ್ಕಾರ - Mahanayaka

ಮೈಕ್ರೋ ಫೈನಾನ್ಸ್ ವಿರುದ್ಧ ಕಾನೂನು ತರುವ ನಿರ್ಧಾರಕ್ಕೆ ಹಿನ್ನಡೆ: ರಾಜ್ಯಪಾಲರಿಂದ ಸುಗ್ರೀವಾಜ್ಞೆ ತಿರಸ್ಕಾರ

thwar chandra gehlot
07/02/2025

ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲು ನಿರ್ಧರಿಸಿತ್ತು. ಆದ್ರೆ ಇದೀಗ ಮೈಕ್ರೋ ಫೈನಾನ್ಸ್ ವಿರುದ್ಧದ ಸರ್ಕಾರದ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ.

ಮೈಕ್ರೋ ಫೈನಾನ್ಸ್ ಗಳನ್ನು ನಿಯಂತ್ರಣಕ್ಕೆ ತರಲು ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಲು ಮುಂದಾಗಿತ್ತು. ಆದ್ರೆ ಈ ಸುಗ್ರಿವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದಾರೆ.

ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ – 2025 ಕರಡು ಪ್ರತಿ ರಾಜ್ಯಪಾಲರಿಗೆ ರವಾನೆ ಮಾಡಲಾಗಿತ್ತು. ರಾಜಭವನಕ್ಕೆ ಸಿಎಂ ಕಚೇರಿ ಕಡತ ಸಲ್ಲಿಸಿತ್ತು. ಸಿಎಂ ಅನುಮೋದನೆಯ ಬಳಿಕ ರಾಜ್ಯಪಾಲರಿಗೆ ರವಾನೆ ಮಾಡಲಾಗಿತ್ತು. ಆದ್ರೆ ರಾಜ್ಯಪಾಲರು ಈ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿದ್ದಾರೆ.

ಸುಗ್ರೀವಾಜ್ಞೆ ತಿರಸ್ಕಾರಕ್ಕೆ ಕಾರಣ ಏನು?

ಸುಗ್ರೀವಾಜ್ಞೆ ತಿರಸ್ಕಾರಕ್ಕೆ ರಾಜ್ಯಪಾಲರು ಕೆಲವು ಕಾರಣಗಳನ್ನು ನೀಡಿದ್ದಾರೆ. 10 ವರ್ಷಗಳ ಸಜೆ ಮತ್ತು 5 ಲಕ್ಷ ದಂಡ ವಿಪರೀತವಾಗಿದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸ್ ಇಲಾಖೆಯು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಬಳಸಬಹುದಿತ್ತು. ಈ ಸುಗ್ರೀವಾಜ್ಞೆ ಕಿರುಬಂಡವಾಳದ ಮೇಲೆ ನಕಾರಾತ್ಮ ಪರಿಣಾಮ ಬೀರುವ ಸಾಧ್ಯತೆಗಳಿವೆ ಮತ್ತು ಬಡವರ ಮೇಲೆ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.


 

ಇತ್ತೀಚಿನ ಸುದ್ದಿ