ಬಿಜೆಪಿಯಿಂದ ಆಪರೇಷನ್ ವಿಚಾರ: ತನಿಖೆಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆದೇಶ - Mahanayaka

ಬಿಜೆಪಿಯಿಂದ ಆಪರೇಷನ್ ವಿಚಾರ: ತನಿಖೆಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆದೇಶ

07/02/2025

ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಾಡಿರುವ ಆರೋಪದ ಕುರಿತು ತನಿಖೆಗೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಆದೇಶಿಸಿದ ಬೆನ್ನಲ್ಲೇ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕೇಜ್ರಿವಾಲ್ ರ ಮನೆಗೆ ತಲುಪಿದ್ದಾರೆ.

 

ಕೇಜ್ರಿವಾಲ್ ರ ಆಮಿಷ ಆರೋಪದ ಕುರಿತು ಎಸಿಬಿ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ರಾಜ್ಯ ಸರ್ಕಾದ ಪ್ರಧಾನ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅದರ ಅನ್ವಯ ತನಿಖೆಗೆ ಆದೇಶಿಸಲಾಗಿತ್ತು. ಈ ಬೆನ್ನಲ್ಲೇ ಎಸಿಬಿ ತಂಡ ಕ್ರೇಜಿವಾಲ್ ಮನೆಗೆ ಬಂದಿದೆ. ಆದರೆ, ಅವರಿಗೆ ಪ್ರವೇಶ ನಿರಾಕರಿಸಲಾಗಿದೆ.

ಫೆಬ್ರವರಿ 8ರಂದು ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುವ ಮುನ್ನ ಎಎಪಿಯ 16 ಅಭ್ಯರ್ಥಿಗಳನ್ನು ಖರೀದಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕೇಜ್ರಿವಾಲ್ ಗುರುವಾರ ಆರೋಪಿಸಿದ್ದರು.
ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಸಚಿವ ಸ್ಥಾನ ಮತ್ತು ಪಕ್ಷ ಬದಲಾಯಿಸಿದರೆ ತಲಾ 15 ಕೋಟಿ ರೂಪಾಯಿಗಳ ಭರವಸೆ ಸಿಕ್ಕಿದೆ ಎಂದು ಕೇಜ್ರಿವಾಲ್ ಹೇಳಿದ್ದರು.
ಎಎಪಿಯ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ಇತರ ನಾಯಕರು ಕೂಡ ಇದೇ ರೀತಿಯ ಆರೋಪಗಳನ್ನು ಮಾಡಿದ್ದರು.

ಅರವಿಂದ್ ಕೇಜ್ರಿವಾಲ್ ಅವರ ಮನೆಗೆ ಎಸಿಬಿ ತಂಡದ ಆಗಮಿಸಿದ್ದನ್ನು ಎಎಪಿ ಕಾನೂನು ಘಟಕದ ಅಧ್ಯಕ್ಷ ಸಂಜೀವ್ ನಾಸಿಯರ್ ಪ್ರಶ್ನಿಸಿದ್ದಾರೆ. “ಇದು ತುಂಬಾ ಆಶ್ಚರ್ಯಕರ ಬೆಳವಣಿಗೆ ಎಂದಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ