‘ನವಗ್ರಹ’ ಚಿತ್ರದಲ್ಲಿ ‘ಶೆಟ್ಟಿ’ ಪಾತ್ರದಲ್ಲಿ ನಟಿಸಿದ್ದ ಗಿರಿ ದಿನೇಶ್ ಹೃದಯಾಘಾತಕ್ಕೆ ಬಲಿ

ಸೂಪರ್ ಹಿಟ್ ಸಿನಿಮಾ ‘ನವಗ್ರಹ’ ಚಿತ್ರದಲ್ಲಿ ‘ಶೆಟ್ಟಿ’ ಪಾತ್ರದಲ್ಲಿ ನಟಿಸಿದ್ದ ಗಿರಿ ದಿನೇಶ್ ಅವರು ಫೆ.7ರಂದು ಹಠಾತ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗಿರಿ ದಿನೇಶ್ ಆರೋಗ್ಯವಾಗಿಯೇ ಇದ್ದರು. ಫೆ.7ರಂದು ಸಂಜೆ ಇವರ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ಏಕಾಏಕಿ ಎದೆನೋವಿನಿಂದ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ನಿಧನರಾಗಿದ್ದಾರೆ.
ಗಿರಿ ಅವರಿಗೆ 45 ವರ್ಷ ವಯಸ್ಸಾಗಿತ್ತು. ಅಣ್ಣನ ಮನೆಯಲ್ಲಿ ವಾಸ್ತವ್ಯವಿದ್ದ ಗಿರಿ ದಿನೇಶ್ ಅವರು ಅವಿವಾಹಿತರಾಗಿದ್ದರು. ಸಿನಿಮಾ ಕ್ಷೇತ್ರಗಳಲ್ಲಿ ಅವಕಾಶ ಕಡಿಮೆಯಾಗಿದ್ದರಿಂದ ಅವರು ಸಿನಿಮಾ ಕ್ಷೇತ್ರದಿಂದ ದೂರ ಉಳಿಯಲು ನಿರ್ಧರಿಸಿದ್ದರು ಎನ್ನಲಾಗಿದೆ.
ಚಂದನವನದ ಖಳನಟ ಪುತ್ರರೇ ಸೇರಿ ಮಾಡಿದ ‘ನವಗ್ರಹ’ ಸಿನಿಮಾದಲ್ಲಿ ಗಿರಿ ದಿನೇಶ್ ‘ಶೆಟ್ಟಿ’ ಪಾತ್ರಕ್ಕೆ ಜೀವ ತುಂಬಿದ್ದರು. ಅವರ ಕಾಮಿಡಿ ನಟನೆಗೆ ಜನ ಬಿದ್ದು ಬಿದ್ದು ನಕ್ಕಿದ್ದರು.
ನವಗ್ರಹ ಬಳಿಕ ವಜ್ರ, ಚಮ್ಕಾಯ್ಸಿ ಚಿಂದಿ ಉಡಾಯ್ಸಿ ಚಿತ್ರಗಳಲ್ಲಿ ಗಿರಿ ದಿನೇಶ್ ಮಿಂಚಿದ್ದರು. ಗಿರಿ ದಿನೇಶ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: