ಹಠಾತ್ ಸಾವು ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಲು  ತಜ್ಞರು, ವಿಜ್ಞಾನಿಗಳ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ - Mahanayaka
12:59 PM Saturday 8 - February 2025

ಹಠಾತ್ ಸಾವು ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಲು  ತಜ್ಞರು, ವಿಜ್ಞಾನಿಗಳ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

siddaramaiah
08/02/2025

ಬೆಂಗಳೂರು: ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು, ಕೊರೊನಾ ಕಾಲದ ನಂತರದಿಂದ ಎಳೆಯ ವಯಸ್ಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು.

ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.

ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ