ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು - Mahanayaka
12:34 AM Wednesday 19 - March 2025

ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

accident releted
11/02/2025

Road Accident– ಚಿಕ್ಕಮಗಳೂರು: ಮರಕ್ಕೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ತಮಟದಹಳ್ಳಿ ಗೇಟ್ ಬಳಿ ನಡೆದಿದೆ.


Provided by

ಪ್ರತಾಪ್ (28) ಗೋವಿಂದ (30) ಮೃತ ದುರ್ದೈವಿಗಳಾಗಿದ್ದಾರೆ.  ಅಜ್ಜಂಪುರದ ಐತಿಹಾಸಿಕ ಅಂತರಘಟ್ಟೆ ಜಾತ್ರೆಗೆ ಹೋಗುವಾಗ ಘಟನೆ ನಡೆದಿದೆ. 11 ದಿನದ ಅಂತರಘಟ್ಟೆ ಜಾತ್ರೆ ಇಂದು ಕಡೇ ದಿನವಾಗಿತ್ತು.

ಮೃತರು ಅಜ್ಜಂಪುರ ತಾಲೂಕಿನ ಬಗ್ಗವಳ್ಳಿ ಮೂಲದವರು ಎಂದು ತಿಳಿದು ಬಂದಿದೆ.  ಓವರ್‌ ಸ್ಪೀಡ್ ಹಿನ್ನೆಲೆ ನಿಯಂತ್ರಣ ಕಳೆದುಕೊಂಡು ಬೈಕ್  ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ  ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ