‘ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಗುರಿ: ದೇಶದ ಭವಿಷ್ಯ ಅಪಾಯದಲ್ಲಿದೆ’ ಎಂದ ಶಿವಸೇನೆ ಯುಬಿಟಿ ನಾಯಕ ಆದಿತ್ಯ ಠಾಕ್ರೆ

ದೇಶದ ಪ್ರತಿಯೊಂದು ಪ್ರಾದೇಶಿಕ ಪಕ್ಷವನ್ನು ಒಡೆದು ಮುಗಿಸುವುದು ಬಿಜೆಪಿಯ ಕನಸಾಗಿರುವುದರಿಂದ ದೇಶದ ಭವಿಷ್ಯ ಅಪಾಯದಲ್ಲಿದೆ ಎಂದು ಶಿವಸೇನೆ ಯುಬಿಟಿ ನಾಯಕ ಆದಿತ್ಯ ಠಾಕ್ರೆ ಹೇಳಿದ್ದಾರೆ. ಹರಿಯಾಣ, ಮಹಾರಾಷ್ಟ್ರ ಮತ್ತು ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಕಳಪೆ ಪ್ರದರ್ಶನದೊಂದಿಗೆ, ಇಂಡಿಯಾ ಒಕ್ಕೂಟವು ಎನ್‌ಡಿಎ ವಿರುದ್ಧದ ಹೋರಾಟದಲ್ಲಿ ಸವಾಲುಗಳನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿಯೇ ಬಂದ ಆದಿತ್ಯ ಠಾಕ್ರೆಯ ಹೇಳಿಕೆ ಮಹತ್ವ ಪಡೆಯುತ್ತಿದೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿವಸೇನೆ ಯುಬಿಟಿ ನಾಯಕ ಆದಿತ್ಯ ಠಾಕ್ರೆ, “ಇಂದು ನಮ್ಮ ದೇಶದ ಭವಿಷ್ಯ ಅಪಾಯದಲ್ಲಿದೆ. ದೇಶದಲ್ಲಿ ಮತದಾರರ ವಂಚನೆ ಮತ್ತು ಇವಿಎಂ ವಂಚನೆಯ ಮಧ್ಯೆ ನಮ್ಮ ಮತ ಎಲ್ಲಿಗೆ ಹೋಗುತ್ತಿದೆ ಎಂದು ನಮಗೇ ಗೊತ್ತಾಗುತ್ತಿಲ್ಲ. ದೇಶದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ನಡೆಯುತ್ತಿವೆಯೇ? ನಾವು ಪ್ರಜಾಪ್ರಭುತ್ವದಲ್ಲಿ ವಾಸಿಸುತ್ತಿದ್ದೇವೆ ಭಾವಿಸಿದ್ದೇವೆ. ಆದರೆ, ಅದು ಇದು ಪ್ರಜಾಪ್ರಭುತ್ವವಲ್ಲ. ನಮಗೆ, ಕೇಜ್ರಿವಾಲ್ ಅವರಿಗೆ ಮತ್ತು ಕಾಂಗ್ರೆಸ್‌ಗೆ ಏನಾಯಿತೋ, ಭವಿಷ್ಯದಲ್ಲಿ ನಿತೀಶ್, ಆರ್‌ಜೆಡಿ ಮತ್ತು ಚಂದ್ರಬಾಬು ನಾಯ್ಡು ಅವರಿಗೂ ಆಗಬಹುದು” ಎಂದು ಹೇಳಿದ್ದಾರೆ.
ಇಂಡಿಯಾ ಒಕ್ಕೂಟದ ನಾಯಕರ ಭೇಟಿಯ ಕುರಿತು ಮಾತನಾಡಿದ ಆದಿತ್ಯ ಠಾಕ್ರೆ, ದೇಶದ ಭವಿಷ್ಯಕ್ಕಾಗಿ ಮಾರ್ಗಸೂಚಿಯನ್ನು ಸಿದ್ಧಪಡಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
“ಇಂಡಿಯಾ ಒಕ್ಕೂಟದಲ್ಲಿ ಮಾರ್ಗಸೂಚಿ ಸಿದ್ಧಪಡಿಸುವ ಅನೇಕ ಹಿರಿಯ ನಾಯಕರಿದ್ದಾರೆ. ಇಂಡಿಯಾ ಒಕ್ಕೂಟದ ಜಂಟಿ ನಾಯಕತ್ವವನ್ನು ಹೊಂದಿದೆ. ಒಬ್ಬನೇ ಒಬ್ಬ ನಾಯಕನಲ್ಲ. ಇದು ಅಹಂಕಾರದ ಹೋರಾಟ ಅಥವಾ ಒಬ್ಬರ ಲಾಭಕ್ಕಾಗಿ ಅಲ್ಲ, ಬದಲಾಗಿ ದೇಶದ ಭವಿಷ್ಯಕ್ಕಾಗಿ ಹೋರಾಟ” ಎಂದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj