14 ದಿನದ ಮಗು, ಪತಿಯನ್ನು ತ್ಯಜಿಸಿ ಮಹಿಳೆ ಸಾವಿಗೆ ಶರಣು!

ಕೊಡಗು: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ.
ವೀರಾಜಪೇಟೆ ತಾಲೂಕು ಕರಡ ಕೊಟ್ಟೋಳಿ ಗ್ರಾಮ ನಿವಾಸಿ ಎಂ.ಎಂ.ದಿನೇಶ್ ಎಂಬವರ ಪತ್ನಿ ಕಾವೇರಮ್ಮ(24) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ.
ದಿನೇಶ್ ಹಾಗೂ ಕಾವೇರಮ್ಮ 4 ವರ್ಷಗಳ ಹಿಂದೆ ಮದುವೆಯಾಗಿದ್ದರು. ಫೆಬ್ರವರಿ 12ರಂದು ದಿನೇಶ್ ತಮ್ಮ ಮನೆಯ ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಗು ಅಳುವ ಶಬ್ದ ಕೇಳಿ ಓಡಿ ಬಂದು ನೋಡಿದ ವೇಳೆ ಕಾವೇರಮ್ಮ ಸ್ನಾನದ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.
ಮೃತ ಕಾವೇರಮ್ಮ ಅವರ ಅಣ್ಣ ಎಂ.ಎ.ತಿಮ್ಮಯ್ಯ ಅವರು ನೀಡಿದ ದೂರಿನ ಮೇರೆಗೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆಯ ಬಳಿಕ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: