ಶಾಕಿಂಗ್ ನ್ಯೂಸ್:  ಬಿಜೆಪಿ ಶಾಸಕನ ಕಾರಿನಲ್ಲಿ ಇವಿಎಂ ಪತ್ತೆ - Mahanayaka
1:13 PM Thursday 12 - December 2024

ಶಾಕಿಂಗ್ ನ್ಯೂಸ್:  ಬಿಜೆಪಿ ಶಾಸಕನ ಕಾರಿನಲ್ಲಿ ಇವಿಎಂ ಪತ್ತೆ

evm
02/04/2021

ಗುವಾಹಟಿ : ಬಿಜೆಪಿ ಶಾಸಕರೋರ್ವರ ಕಾರಿನಲ್ಲಿ ಇವಿಎಂ ಪತ್ತೆಯಾಗಿರುವ ಘಟಬನೆ ನಡೆದಿದ್ದು, ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಈಗಾಗಲೇ ಇವಿಎಂ ಬಗ್ಗೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಈ ನಡುವೆ ಇಂತಹದ್ದೊಂದು ಘಟನೆ ನಡೆದಿರುವುದು ಚುನಾವಣೆ ವ್ಯವಸ್ಥೆಯ ಭದ್ರತೆಯ ಬಗೆಗೆ ಹಲವು ಪ್ರಶ್ನೆಗಳು ಉದ್ಭವಿಸಲು ಕಾರಣವಾಗಿದೆ.

ಬಿಜೆಪಿ ಶಾಸಕ ಕೃಷ್ಣೇಂಡು ಪಾಲ್ ಅವರಿಗೆ ಸೇರಿದ ಕಾರಿನಲ್ಲಿಇವಿಎಂ ಪತ್ತೆಯಾದ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ಅಸ್ಸಾಂನ ಕರೀಂಗಂಜ್ ನಲ್ಲಿ ನಿಯೋಜಿಸಲ್ಪಟ್ಟ ನಾಲ್ವರು ಮತಗಟ್ಟೆ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಮತಗಟ್ಟೆಯ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ ನೀಡಿದ್ದು, ಈ ಸಂಬಂಧ ಎಫ್ ಐಆರ್ ಕೂಡ ದಾಖಲಿಸಲಿದೆ.

ಅಸ್ಸಾಂ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ನಂತರ ಕರೀಂಗಂಜ್ ನಲ್ಲಿ ಹಿಂಸಾಚಾರ ಭುಗಿಲೆದ್ದ ಮರುದಿನವೇ ಈ ಕ್ರಮ ನಡೆದಿದ್ದು, ಶಾಸಕರ ಮಹೀಂದ್ರ ಬೊಲೆರೊ ಕಾರಿನಲ್ಲಿ ಇವಿಎಂ ಪತ್ತೆಯಾಗಿತ್ತು. ಹೀಗಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ವು ಮತಗಟ್ಟೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡಿತ್ತು. ಜಿಲ್ಲಾ ಚುನಾವಣಾ ಅಧಿಕಾರಿ ನೀಡಿದ ಪ್ರಾಥಮಿಕ ವರದಿಪ್ರಕಾರ, ‘ತಾವು ಪ್ರಯಾಣಿಸುತ್ತಿದ್ದ ವಾಹನವು ಬಿಜೆಪಿ ಶಾಸಕನಿಗೆ ಸೇರಿದ್ದು ಎಂದು ಮತಗಟ್ಟೆ ಅಧಿಕಾರಿಗಳಿಗೆ ಆರಂಭದಲ್ಲಿ ತಿಳಿದಿರಲಿಲ್ಲ’ ಎಂದು ಹೇಳಿದ್ದಾರೆ

 

ಇತ್ತೀಚಿನ ಸುದ್ದಿ