ದಿಲ್ಲಿ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ಕೊನೆಗೂ ಪರಿಹಾರ - Mahanayaka

ದಿಲ್ಲಿ ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ಕೊನೆಗೂ ಪರಿಹಾರ

17/02/2025

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ ಯಾತ್ರಿಕರು ನಿನ್ನೆ ದಿಲ್ಲಿಯ ರೈಲು ನಿಲ್ದಾಣದಲ್ಲಾದ ಕಾಲ್ತುಳಿತದಲ್ಲಿ ಮೃತಪಟ್ಟಿದ್ದರು .ಮೃತರ ಕುಟುಂಬಗಳಿಗೆ ರೈಲ್ವೆ ಇಲಾಖೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದೆ. ಮೃತರ ಮರಣೋತ್ತರ ಪರೀಕ್ಷೆಯನ್ನು ರಾತ್ರಿಯವರೆಗೂ ನಡೆಸಿ, ಶವಾಗಾರದಲ್ಲೇ ಮೃತರ ಕುಟುಂಬಗಳಿಗೆ 10 ಲಕ್ಷ ರೂ. ನಗದು ಪರಿಹಾರ ನೀಡಿ ಆಂಬ್ಯುಲೆನ್ಸ್ ಮೂಲಕ ಮೃತದೇಹವನ್ನು ಕಳುಹಿಸಿಕೊಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ದಿಲ್ಲಿ ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ,ಗಂಭೀರವಾಗಿ ಗಾಯಗೊಂಡ ಮೂವರು ಸಂತ್ರಸ್ತರಿಗೆ ತಲಾ 2.5 ಲಕ್ಷ ರೂ, ನಗರದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆದ 12 ಪ್ರಯಾಣಿಕರಿಗೆ ತಲಾ 1 ಲಕ್ಷ ರೂ. ಪರಿಹಾರವನ್ನು ನೀಡಲಾಗಿದೆ.

ಉತ್ತರ ರೈಲ್ವೆಯಿಂದ ಎಲ್ಲಾ ಪರಿಹಾರವನ್ನು ಮೃತರ ಮತ್ತು ಗಾಯಗೊಂಡವರ ಕುಟುಂಬಸ್ಥರಿಗೆ ನೀಡಲಾಗಿದೆ ಎಂದು ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ದಿಲೀಪ್ ಕುಮಾರ್ ತಿಳಿಸಿದ್ದಾರೆ.

ದಿಲ್ಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಮೃತಪಟ್ಟಿದ್ದಾರೆ. ಪ್ರಯಾಣಿಕರಿಗೆ ರೈಲುಗಳ ಕುರಿತ ಗೊಂದಲ ಕಾಲ್ತುಳಿತಕ್ಕೆ ಕಾರಣ ಎಂದು ಪ್ರಾಥಮಿಕವಾಗಿ ಹೇಳಲಾಗಿದ್ದರೂ, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ