ಅತ್ಯಾಚಾರಕ್ಕೊಳಗಾಗಿದ್ದ 10ನೇ ತರಗತಿ ಬಾಲಕಿ ಹೆರಿಗೆ ವೇಳೆ ಸಾವು - Mahanayaka

ಅತ್ಯಾಚಾರಕ್ಕೊಳಗಾಗಿದ್ದ 10ನೇ ತರಗತಿ ಬಾಲಕಿ ಹೆರಿಗೆ ವೇಳೆ ಸಾವು

pregnant
18/02/2025

ಚಿತ್ತೂರು: ಅತ್ಯಾಚಾರದ ಪರಿಣಾಮ ಗರ್ಭಿಣಿಯಾಗಿದ್ದ 10 ನೇ ತರಗತಿಯ ಬಾಲಕಿ ಹೆರಿಗೆ ವೇಳೆ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ.

ಸಂತ್ರಸ್ತ ಬಾಲಕಿಯ ಕುಟುಂಬದ ಜೊತೆಗೆ ಉತ್ತಮ ನಂಟು ಹೊಂದಿದ್ದ ಆರೋಪಿಯೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ. ಇದರ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿ ಬಾಲಕಿ ಮೃತಪಟ್ಟಿದ್ದಾಳೆ.

ಹೆರಿಗೆಯಾದ ಬಳಿಕ ಬಾಲಕಿಯ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ರಕ್ತಹೀನತೆ, ಉಸಿರಾಟದ ತೊಂದರೆಗಳಿಂದ ಆಕೆ ಬಳಲಿದ್ದಳು. ಹೀಗಾಗಿ ಆಕೆಯನ್ನು ತಿರುಪತಿ ಆಸ್ಪತ್ರೆಗೆ ವರ್ಗಾಯಿಸಲಾಯಿತು. ವೈದ್ಯರ ಅತ್ಯುತ್ತಮ ಪ್ರಯತ್ನಗಳ ಬಳಿಕವೂ ಭಾನುವಾರ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿ ತಲೆಮರೆಸಿಕೊಂಡಿದ್ದಾನೆ. ಸದ್ಯ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ