ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ 503 ಗ್ರೂಪ್ ಡಿ ಹುದ್ದೆಗಳ ನೇಮಕಾತಿ: ಬೇಗನೇ ಅರ್ಜಿ ಸಲ್ಲಿಸಿ - Mahanayaka
11:17 AM Saturday 22 - February 2025

ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ 503 ಗ್ರೂಪ್ ಡಿ ಹುದ್ದೆಗಳ ನೇಮಕಾತಿ: ಬೇಗನೇ ಅರ್ಜಿ ಸಲ್ಲಿಸಿ

railway department group d jobs
20/02/2025

Railway Department Group D Jobs : ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು ದೇಶಾದ್ಯಂತ ಒಟ್ಟು 32,428 ಗ್ರೂಪ್ ಡಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಕೆಲ ದಿನಗಳ ಹಿಂದೆ ಅರ್ಜಿ ಸಲ್ಲಿಸಲು ಆಹ್ವಾನಿಸಿತ್ತು.

ಈ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇನ್ನೂ ಕೇವಲ 3 ದಿನ ಬಾಕಿ ಇದ್ದು, ಫೆಬ್ರವರಿ 22, 2025 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳಲ್ಲಿ ಹುಬ್ಬಳ್ಳಿ ನೈರುತ್ಯ ವಿಭಾಗಕ್ಕೆ 503 ಹುದ್ದೆಗಳನ್ನು ಮಿಸಲೀಡಲಾಗಿದೆ.

ಅರ್ಹತೆಗಳು ಮತ್ತು ವಯೋಮಿತಿ :

ರೈಲ್ವೆ ಇಲಾಖೆಯ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಮತ್ತು ವಯೋಮಿತಿಯು 18 ರಿಂದ 36 ವರ್ಷದ ಒಳಗಿನವರಾಗಿರಬೇಕು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕದ ವಿವರ :

* ಅಂಗವಿಕಲ ಅಭ್ಯರ್ಥಿಗಳು, ಮಹಿಳೆಯರು, ತೃತೀಯ ಲಿಂಗಿಗಳು, ಮಾಜಿ ಸೈನಿಕ ಅಭ್ಯರ್ಥಿಗಳು ಹಾಗೂ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ 250ರೂ.

* ಇವರನ್ನು ಹೊರತುಪಡಿಸಿ ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿ.

ನೇಮಕಾತಿಯ ಪ್ರಮುಖ ದಿನಾಂಕಗಳು :

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 22 ಫೆಬ್ರವರಿ 2025

* ಶುಲ್ಕ ಪಾವತಿ ಕೊನೆಯ ದಿನಾಂಕ – 23 ಫೆಬ್ರವರಿ 2025

ಅರ್ಜಿ ಸಲ್ಲಿಸುವ ಲಿಂಕ್:  https://www.rrbbnc.gov.in/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ