ಕುಂಭಮೇಳಕ್ಕೆ ತೆರಳುತ್ತಿದ್ದ ಕ್ರೂಸರ್ ಬಸ್ ಗೆ ಡಿಕ್ಕಿ: ಬೆಳಗಾವಿಯ 6 ಮಂದಿ ಸಾವು

ಜಬಲ್ಪುರ: ಕುಂಭಮೇಳಕ್ಕೆ ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ ಬೆಳಗಾವಿಯ ಆರು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.
ಸೋಮವಾರ ಬೆಳಗ್ಗಿನ ಜಾವ ಕ್ರೂಸರ್ ವಾಹನ ಮಧ್ಯಪ್ರದೇಶದ ಜಬಲ್ಪುರ ಪೆಹರಾ ಟೋಲ್ ನಾಕಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಆರು ಮಂದಿ ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಗೋಕಾಕ್ ತಾಲೂಕಿನ ಲಕ್ಷ್ಮೀ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ(50), ಸುನೀಲ್ ಶೇಡಶ್ಯಾಳೆ(45), ಬಸವರಾಜ್ ಕುರ್ತಿ(63), ಬಸವರಾಜ್ ದೊಡಮಾಳ್(49), ಈರಣ್ಣ ಶೇಬಿನಕಟ್ಟಿ(27), ವಿರೂಪಾಕ್ಷ ಗುಮತಿ(61) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: