ಆಕಸ್ಮಿಕ ಬೆಂಕಿ ಅವಘಡ: ಮನೆ ಸಂಪೂರ್ಣ ಸುಟ್ಟು ಭಸ್ಮ, ಮಹಿಳೆಗೆ ಗಂಭೀರ ಗಾಯ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆಯಾಗಿದೆ.
ಈ ದುರ್ಘಟನೆಯಲ್ಲಿ ಮನೆಯಲ್ಲಿ ಇದ್ದ ಗೃಹಪಯೋಗಿ ವಸ್ತುಗಳು ಬಹುತೇಕ ನಾಶವಾಗಿದ್ದು, ಹತ್ತಾರು ಮೂಟೆ ಕಾಫಿ ಬೀಜಗಳು ಕೂಡಾ ಬೆಂಕಿಗಾಹುತಿಯಾಗಿವೆ.
ಅಗ್ನಿ ಅವಘಡದ ವೇಳೆ ಮನೆಯಲ್ಲಿ ಇದ್ದ ರೇಖಾ (36) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಡಿಗೆಗೆ ಸ್ಟವ್ ಹಚ್ಚುವ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ:
ಮೂಡಿಗೆರೆಯ ಮಾಳಿಗನಾಡು ಗ್ರಾಮದ ಸುನೀಲ್ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: