ಇಂದು ಸಂಜೆ ಬಿಹಾರ ಸಚಿವ ಸಂಪುಟ ವಿಸ್ತರಣೆ: 5 ಬಿಜೆಪಿ ಶಾಸಕರು ಸೇರುವ ಸಾಧ್ಯತೆ

ಬಿಜೆಪಿಯಿಂದ ಐದು ಹೊಸ ಮುಖಗಳ ಸೇರ್ಪಡೆಯೊಂದಿಗೆ ಬಿಹಾರ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ 4 ಗಂಟೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರು ಕಂದಾಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಘೋಷಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ.
ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ಚುನಾವಣೆ ನಡೆಯುವುದರಿಂದ್ದ ಈ ವಿಸ್ತರಣೆ ಮಹತ್ವವನ್ನು ಪಡೆದುಕೊಂಡಿದೆ.
ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಜೈಸ್ವಾಲ್, “ನಾನು ಕಂದಾಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ. ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎಂಬ ತತ್ವದ ಮೇಲೆ ಪಕ್ಷ ಕೆಲಸ ಮಾಡುತ್ತದೆ. ಪಕ್ಷದ ರಾಜ್ಯ ಘಟಕದ ಜವಾಬ್ದಾರಿಯನ್ನು ಕೇಂದ್ರ ನಾಯಕತ್ವ ನನಗೆ ನೀಡಿದ್ದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj