ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಅಪಘಾತ: ಐವರು ಸಾವು

01/03/2025
ಚಾಮರಾಜನಗರ: ಟಿಪ್ಪರ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ನಡೆದಿದೆ.
ಮೃತಪಟ್ಟವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಾಗಿದ್ದು, ಇವರು ಮಂಡ್ಯ ಮೂಲದವರು ಎಂದು ತಿಳಿದು ಬಂದಿದೆ. ಟಿಪ್ಪರ್ ಡಿಕ್ಕಿಯಾದ ತೀವ್ರತೆಗೆ ರಸ್ತೆ ಪಕ್ಕಕ್ಕೆ ಕಾರು ಎತ್ತಿ ಎಸೆಯಲ್ಪಟ್ಟಿದೆ.
ಕಾರು ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೊಳ್ಳೇಗಾಲದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: