ಲೈಂಗಿಕ ದೌರ್ಜನ್ಯಕ್ಕೆ ಮಗುವಿನ ನಡವಳಿಕೆ ಕಾರಣ ಎಂದ ಜಿಲ್ಲಾಧಿಕಾರಿ!

ಚೆನ್ನೈ: ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮಗುವಿನ ವರ್ತನೆಯೇ ಕಾರಣ ಎಂಬ ಹೇಳಿಕೆ ನೀಡಿದ್ದ ತಮಿಳುನಾಡಿನ ಮೈಲಾಡುತುರೈ ಜಿಲ್ಲಾಧಿಕಾರಿ ಎ.ಪಿ.ಮಹಾಭಾರತಿ ಅವರನ್ನು ತಮಿಳುನಾಡು ಸರ್ಕಾರ ವರ್ಗಾವಣೆ ಮಾಡಿದೆ.
ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಮಹಾಭಾರತಿ, ನನಗೆ ಬಂದ ವರದಿಯ ಪ್ರಕಾರ ಮೂರೂವರೆ ವರ್ಷದ ಮಗು ತಪ್ಪಾಗಿ ವರ್ತಿಸಿದೆ. ಆರೋಪಿಯ ಮೇಲೆ ಮಗು ಉಗುಳಿದ್ದು, ಇದು ದೌರ್ಜನ್ಯಕ್ಕೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ.
ಪೋಕ್ಸೋ ಕಾಯ್ದೆಯಲ್ಲಿ ಎರಡೂ ಕಡೆಯ ವಿಷಯಗಳನ್ನು ಪರಿಗಣಿಸುವುದು ಮುಖ್ಯವಾಗಿದೆ ಎಂದು ಮಹಾಭಾರತಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅವರನ್ನು ವರ್ಗಾವಣೆ ಮಾಡಲಾಗಿದೆ.
ಮೈಲಾಡುತುರೈನಲ್ಲಿ ಮೂರೂವರೆ ವರ್ಷದ ಮಗುವಿನ ಮೇಲೆ 16 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮಹಾಭಾರತಿ ನೀಡಿದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: