124 ವರ್ಷಗಳಲ್ಲಿಯೇ ಭಾರತದಲ್ಲಿ ಅತಿ ಹೆಚ್ಚಿನ ತಾಪಮಾನ: ಹವಾಮಾನ ಇಲಾಖೆ - Mahanayaka

124 ವರ್ಷಗಳಲ್ಲಿಯೇ ಭಾರತದಲ್ಲಿ ಅತಿ ಹೆಚ್ಚಿನ ತಾಪಮಾನ: ಹವಾಮಾನ ಇಲಾಖೆ

01/03/2025

ಭಾರತದಲ್ಲಿ ಕಳೆದ 124 ವರ್ಷಗಳಲ್ಲಿಯೇ ಫೆಬ್ರವರಿ ತಿಂಗಳು ಹೆಚ್ಚಿನ ತಾಪಮಾನ ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಭಾರತದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಮಾರ್ಚ್ ನಿಂದ ಮೇ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಫೆಬ್ರವರಿಯಲ್ಲಿ ಸರಾಸರಿ ತಾಪಮಾನವು 1.34 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಿದೆ.

ಸಾಮಾನ್ಯವಾಗಿ 20.70 ಡಿಗ್ರಿ ಸೆಲ್ಸಿಯಸ್‌ ನಷ್ಟು ಇರುತ್ತಿದ್ದ ತಾಪಮಾನವು 22.04 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.
ದೇಶದಲ್ಲಿ ಗರಿಷ್ಠ ತಾಪಮಾನವು 1.49 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಿದ್ದು, ಸಾಮಾನ್ಯವಾಗಿ ಇರುತ್ತಿದ್ದ 27.58 ಡಿಗ್ರಿ ಸೆಲ್ಸಿಯಸ್‌ ತಾಪಮಾನವು ಈ ಬಾರಿ 29.07 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಬೇಸಿಗೆ ಋತುವಿನ ಮುನ್ಸೂಚನೆಯಲ್ಲಿ, ಭಾರತದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಮಾರ್ಚ್ ನಿಂದ ಮೇ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಶುಕ್ರವಾರ ಭಾರತೀಯ ಹವಾಮಾನ ಇಲಾಖೆಯು ಬಿಡುಗಡೆ ಮಾಡಿರುವ ಮಾಹಿತಿ ಹೇಳಿದೆ.

ಜಮ್ಮು, ಹಿಮಾಚಲ ಪ್ರದೇಶ, ಪಂಜಾಬ್, ದಿಲ್ಲಿ, ರಾಜಸ್ಥಾನ, ಉತ್ತರ ಪ್ರದೇಶದ ಬಯಲು ಪ್ರದೇಶಗಳು, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಕರಾವಳಿ – ಉತ್ತರ ಮತ್ತು ಪೂರ್ವ ಮಹಾರಾಷ್ಟ್ರ, ಗೋವಾ ಮತ್ತು ಕರಾವಳಿ ಕರ್ನಾಟಕದಲ್ಲಿ ಈ ಅವಧಿಯಲ್ಲಿ ಹೆಚ್ಚಿನ ತಾಪಮಾನವು ದಾಖಲಾಗಲಿದೆ ಎಂದು ಹೇಳಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ