ಕಾಂಗ್ರೆಸ್ ಕಾರ್ಯಕರ್ತೆಯ ಹತ್ಯೆ ಪ್ರಕರಣ: ತನಿಖೆಗೆ ಎಸ್ಐಟಿ ರಚನೆ

ರೋಹ್ಟಕ್ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಶವವು ಸೂಟ್ ಕೇಸ್ ನಲ್ಲಿ ಪತ್ತೆಯಾದ ಪ್ರಕರಣದ ಕುರಿತಾದ ತನಿಖೆಗಾಗಿ ಹರಿಯಾಣ ಪೊಲೀಸರು ಭಾನುವಾರ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದ್ದಾರೆ. ನರ್ವಾಲ್ ಅವರು ಸಂಸದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯೊಂದಿಗೆ ಸಂಬಂಧ ಹೊಂದಿರುವುದರಿಂದ ಅವರ ಸಾವಿನ ಬಗ್ಗೆ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ.
ಶನಿವಾರ ಸಂಪ್ಲಾ ಪಟ್ಟಣದ ಬಸ್ ನಿಲ್ದಾಣದ ಬಳಿ ಶವವನ್ನು ಸೂಟ್ ಕೇಸ್ ನಲ್ಲಿ ತುಂಬಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ಎಸ್ಐಟಿ ರಚಿಸಲಾಗಿದೆ. ಆಕೆಯ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ನಾವು ಸೈಬರ್ ಮತ್ತು ಎಫ್ಎಸ್ಎಲ್ (ವಿಧಿವಿಜ್ಞಾನ ಪ್ರಯೋಗಾಲಯ) ಸಹಾಯವನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಜನೀಶ್ ಕುಮಾರ್ ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj