CISF ಇಲಾಖೆಯಲ್ಲಿ ಸಾವಿರಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ: 10th ಪಾಸಾದವರು ಅರ್ಜಿ ಸಲ್ಲಿಸಿ - Mahanayaka

CISF ಇಲಾಖೆಯಲ್ಲಿ ಸಾವಿರಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ: 10th ಪಾಸಾದವರು ಅರ್ಜಿ ಸಲ್ಲಿಸಿ

cisf recruitment 2025
04/03/2025

CISF Recruitment 2025 : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1 ಸಾವಿರಕ್ಕೂ ಹೆಚ್ಚು ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದ್ದಾರೆ.

ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 5 ಮಾರ್ಚ್ 2025 ರಿಂದ ಆರಂಭವಾಗಲಿದ್ದು, 03ನೇ ಏಪ್ರಿಲ್ 2025ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ನೇಮಕಾತಿಯ ವಿವರಗಳು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಹಾಗೂ ವಿವಿಧ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ :

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಪ್ರಸ್ತುತ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 1,161 ಹುದ್ದೆಗಳು ಖಾಲಿ ಇವೆ. ಕುಕ್, ಟೈಲರ್, ಬಾರ್ಬರ್, ಮೋಟಾರ್ ಪಂಪ್ ಆಪರೇಟರ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಈ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇವೆ.

ಯಾವ ಯಾವ ಅರ್ಹತೆಗಳನ್ನು ಹೊಂದಿರಬೇಕು?

ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿದ್ದು ಸಂಬಂಧಪಟ್ಟ ಟ್ರೇಡ್ ನಲ್ಲಿ ಐಟಿಐ ಪಾಸಾಗಿರಬೇಕು.

ಅದೇ ರೀತಿ ವಯಸ್ಸು 18 ರಿಂದ 23 ವರ್ಷದ ಒಳಗಿರಬೇಕು. ಒಂದು ವೇಳೆ ನೀವು ಮೀಸಲಾತಿ ವರ್ಗಗಳ ಅಡಿಯಲ್ಲಿ ಬರುವುದಾದರೆ ನಿಮಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಸಿಗುವುದು.

ಅಂತಿಮವಾಗಿ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ಸಂಬಳ : 21,700ರೂ. ಯಿಂದ 69,100ರೂ. ವರೆಗೆ.

ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಜಿ ಶುಲ್ಕ :

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

* ಇವರನ್ನು ಹೊರತುಪಡಿಸಿ ಉಳಿದ ವರ್ಗದ ಅಭ್ಯರ್ಥಿಗಳಿಗೆ 100 ರೂಪಾಯಿ ನಿಗದಿಪಡಿಸಲಾಗಿದೆ.

 ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಲಿಂಕ್ : https://cisfrectt.cisf.gov.in/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ