ಕಾಡಾನೆ ದಾಳಿ: ಬೆಳೆ ಹಾನಿಯಿಂದ ಗ್ರಾಮಸ್ಥರಲ್ಲಿ ಆತಂಕ

04/03/2025
ಕೊಟ್ಟಿಗೆಹಾರ, ಮೂಡಿಗೆರೆ: ತಾಲ್ಲೂಕಿನ ಕೊಟ್ಟಿಗೆಹಾರದ ತರುವೆ ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕಾಡಾನೆ ಬೀಡುಬಿಟ್ಟಿದ್ದು, ಗ್ರಾಮಸ್ಥರಲ್ಲಿ ಭಯ ಮೂಡಿಸಿದೆ.
ತರುವೆ ಚೌಡೇಶ್ವರಿ ದೇವಸ್ಥಾನ ಸುತ್ತಮುತ್ತ ಇರುವ ತೋಟಗಳಿಗೆ ನುಗ್ಗಿದ ಆನೆ, ಅಲ್ಲಿನ ಬೆಳೆಗಳಿಗೆ ಹಾನಿ ಮಾಡಿದ್ದು, ರೈತರು ನಷ್ಟ ಅನುಭವಿಸಿದ್ದಾರೆ. ವಿಶೇಷವಾಗಿ, ತರುವೆ ಪಾರ್ವತಿ ಅಶೋಕ ಅವರ ಮನೆಯ ಸಮೀಪವಿರುವ ತೋಟಕ್ಕೆ ನುಗ್ಗಿ, ಬಾಳೆ ಹಾಗೂ ಕಾಫಿ ಗಿಡಗಳನ್ನು ಹಾನಿಗೊಳಿಸಿದೆ.
ಈ ಕಾಡಾನೆ ತರುವೆ ಭಾಗದಲ್ಲಿ ಅಲೆದಾಡುತ್ತಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ಅರಣ್ಯ ಇಲಾಖೆ ತ್ವರಿತವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: