ಭಾರತೀಯ ನೌಕಪಡೆಯಲ್ಲಿ 10th ಪಾಸಾದವರಿಗೆ 300ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Navy Group C Recruitment 2025 : ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ನೌಕಾಪಡೆಯ, ನವಲ್ ಡಾಕ್ ಯಾರ್ಡ್ ವಿಶಾಖಪಟ್ಟಣಂದಲ್ಲಿ ವಿವಿಧ 327 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದ್ದಾರೆ.
10ನೇ ತರಗತಿಯ ಜೊತೆಗೆ ವಿವಿಧ ಅರ್ಹತೆಗಳನ್ನು ಹೊಂದಿರುವಂತಹ ಅಭ್ಯರ್ಥಿಗಳಿಗೆ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಇದ್ದು, ಇದರ ಸಂಪೂರ್ಣ ಮಾಹಿತಿಯನ್ನು ತಿಳಿದು ಈ ಕೂಡಲೇ ಅರ್ಜಿ ಸಲ್ಲಿಸಿರಿ.
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವುದು 12ನೇ ಮಾರ್ಚ್ 2025ರಿಂದ ಆರಂಭವಾಗಲಿದೆ. ಅದೇ ರೀತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01 ಏಪ್ರಿಲ್ 2025 ಆಗಿರುತ್ತದೆ.
ಈ ನೇಮಕಾತಿಯ ಹುದ್ದೆಗಳ ವಿವರ :
* ಸಿರಾಂಗ್ ಆಫ್ ಲಸ್ಕಾರ್ಸ್ ಹುದ್ದೆಗಳು – 57
* ಲಸ್ಕಾರ್ – 1 ಹುದ್ದೆಗಳು : 192 ಹುದ್ದೆಗಳು
* ಅಗ್ನಿಶಾಮಕ ಸಿಬ್ಬಂದಿ ಹುದ್ದೆಗಳು : 73
* ಟಾಪ್ ಪಾಸ್ ಹುದ್ದೆಗಳು : 05 ಹುದ್ದೆಗಳು
ಅರ್ಹತೆಗಳು :
ಈ ಮೇಲಿನ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿದ್ದು ಸಂಬಂಧ ಪಟ್ಟ ಹುದ್ದೆಗಳಿಗೆ ಅನುಗುಣವಾಗಿ ಸೇವಾ ಅನುಭವ ಹೊಂದಿರಬೇಕು ಹಾಗೂ ಈಜುಜ್ಞಾನ ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳುವ ನೇಮಕಾತಿಯ ವಿಧಾನ :
ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಮೊದಲು ಲಿಖಿತ ಪರೀಕ್ಷೆ ನಡೆಸಿ ನಂತರ ಸಂದರ್ಶನ ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುವುದು.
ಅರ್ಜಿ ಶುಲ್ಕ: ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ನೇಮಕಾತಿ ಹಂತದ ವಿಧಾನ: ಈ ನೇಮಕಾತಿಗೆ ಸಂಬಂಧಿಸಿದಂತೆ ಭಾರತೀಯ ನೌಕಾಪಡೆ ಇಲಾಖೆಯು ಸದ್ಯಕ್ಕೆ ಕೇವಲ ಕಿರು ಅಧಿಸೂಚನೆ ಹೊರಡಿಸಿದ್ದು, ಅಧಿಕೃತ ಅಧಿಸೂಚನೆ ಹೊರಡಿಸಿದ ನಂತರ ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಅಭ್ಯರ್ಥಿಗಳಿಗೆ ತಿಳಿಸಲಾಗುವುದು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: