ಆರೋಪಿಗಳ ಬಂಧನವಾದ ಬಳಿಕವೂ ಮತ್ತೊಂದೆಡೆ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆ
05/04/2021
ಉಳ್ಳಾಲ: ಇತ್ತೀಚೆಗಷ್ಟೆ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿತ್ತು. ಈ ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಬೆನ್ನಲ್ಲೇ ಇದೀಗ ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿದೆ.
ಕೆಲವು ದಿನಗಳ ಹಿಂದೆಯಷ್ಟೇ ಕೊರಗಜ್ಜನ ಕಟ್ಟೆಯ ಹುಂಡಿಯಲ್ಲಿ ಕಾಂಡೋಮ್ ಹಾಕಲಾಗಿರುವ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಆರೋಪಿಗಳ ಬಂಧನದ ಬೆನ್ನಲ್ಲೇ ಮತ್ತೆ ಇಂತಹದ್ದೇ ಕೃತ್ಯ ನಡೆದಿದೆ.
ಈ ಪ್ರಕರಣದ ಆರೋಪಿಗಳೇ ಈ ಕೃತ್ಯವನ್ನು ನಡೆಸಿದ್ದಾರೆಯೇ ಎಂಬ ಬಗ್ಗೆಯೂ ಅನುಮಾನ ಸೃಷ್ಟಿಯಾಗಿದೆ. ದೈವಸ್ಥಾನಗಳಲ್ಲಿ ಸಿಸಿ ಕ್ಯಾಮರವನ್ನು ರಹಸ್ಯವಾಗಿ ಅಳವಡಿಸಿದರೆ, ಇಂತಹ ಕೃತ್ಯಗಳಿಗೆ ಕಡಿವಾಣ ಬೀಳಬಹುದು ಎನ್ನುವಅಭಿಪ್ರಾಯಗಳು ಸದ್ಯ ಕೇಳಿ ಬಂದಿದೆ.