SSLC ಪಾಸಾದವರಿಗೆ ರಾಜ್ಯಾದ್ಯಂತ  2,500 ಅಂಗನವಾಡಿ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ.. - Mahanayaka

SSLC ಪಾಸಾದವರಿಗೆ ರಾಜ್ಯಾದ್ಯಂತ  2,500 ಅಂಗನವಾಡಿ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ..

anganavadi
10/03/2025

Anganawadi Recruitment 2025 : ಕರ್ನಾಟಕ ರಾಜ್ಯಾದ್ಯಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಡಿಯಲ್ಲಿ ರಾಜ್ಯದಾದ್ಯಂತ ಇರುವಂತಹ ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು.

ರಾಜ್ಯದಾದ್ಯಂತ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಸೇರಿ ಒಟ್ಟು 2.5 ಸಾವಿರ ಹುದ್ದೆಗಳನ್ನು ನೇಮಕಾತಿಯಲ್ಲಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸುವ ಮಾಹಿತಿಯನ್ನು ನೀಡಲಾಗಿದ್ದು ಅರ್ಹರು ಇದರ ಸದುಪಯೋಗಪಡಿಸಿಕೊಳ್ಳಿ.

 ಹುದ್ದೆಗಳ ವಿಂಗಡಣೆ :

* ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 1,500

* ಅಂಗನವಾಡಿ ಸಹಾಯಕಿ ಹುದ್ದೆಗಳು – 1,000

 ಏನೆಲ್ಲಾ ಅರ್ಹತೆ ಹೊಂದಿರಬೇಕು?

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂಥವರು 10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ ಅರ್ಹತೆಯನ್ನು ನೋಡುವುದಾದರೆ ಕನಿಷ್ಠ 19 ವರ್ಷದವರಾಗಿದ್ದು ಗರಿಷ್ಠ 35 ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು.

 ಅಂಗನವಾಡಿ ಹುದ್ದೆಗಳಿಗೆ ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?

ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಥಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮತ್ತು ವಿವಿಧ ಆಧಾರದ ಮೇಲೆ ನೀಡುವ ಬೋನಸ್ ಅಂಕಗಳನ್ನು ಒಳಗೊಂಡಂತೆ ಮೆರಿಟ್ ಪಟ್ಟಿ ಸಿದ್ದಪಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

ನೀವು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಎಲ್ಲಾ ಅರ್ಹತೆಗಳನ್ನು ಹೊಂದಿದ್ದಲ್ಲಿಲ್ಲಿ, karnatakaone.kar.nic.in ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲಾತಿಗಳನ್ನು ಸರಿಯಾಗಿ ಅಪ್ಲೋಡ್ ಮಾಡಬೇಕು. ಉದಾಹರಣೆಗೆ ವಾಸಸ್ಥಳ ದೃಢೀಕರಣ ಪತ್ರವನ್ನು ಸಂಬಂಧಿತ ತಹಶೀಲ್ದಾರ್ ಅಥವಾ ಉಪ ತಹಶೀಲ್ದಾರರಿಂದ ಮೂರು ವರ್ಷದ ಒಳಗಾಗಿ ಪಡೆದಿರಬೇಕು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ