ಭೀಕರ: ಸೂಟ್ ಕೇಸ್ ನಲ್ಲಿ ಮಹಿಳೆಯ ಕತ್ತರಿಸಿದ ತಲೆ ಪತ್ತೆ

14/03/2025
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಸೂಟ್ ಕೇಸ್ ನಲ್ಲಿ ಮಹಿಳೆಯ ಕತ್ತರಿಸಿದ ತಲೆ ಪತ್ತೆಯಾದ ಘಟನೆ ನಡೆದಿದೆ.
ಗುರುವಾರ ಸಂಜೆ ವಿರಾರ್ ಪ್ರದೇಶದ ಪಿರ್ಕುಂದಾ ದರ್ಗಾ ಬಳಿ ಈ ಘಟನೆ ನಡೆದಿದೆ. ಕೆಲವು ಸ್ಥಳೀಯ ಮಕ್ಕಳು ಬಿಟ್ಟುಹೋದ ಸೂಟ್ ಕೇಸ್ ಅನ್ನು ಕಂಡು ಕುತೂಹಲದಿಂದ ಅದನ್ನು ತೆರೆದಿದ್ದಾರೆ. ನಂತರ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ಸಾಕ್ಷ್ಯಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾಂಡ್ವಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj