ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಐಟಿಐ ಪಾಸಾದ 1 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಉದ್ಯೋಗ

ದಕ್ಷಿಣ ಪೂರ್ವ ರೈಲ್ವೆ ವಿಭಾಗದಲ್ಲಿ ವೆಲ್ಡರ್, ಟರ್ನರ್, ಫಿಟ್ಟರ್, ಎಲೆಕ್ಟ್ರಿಷಿಯನ್, ಆರೋಗ್ಯ ಮತ್ತು ನೈರ್ಮಲ್ಯ ನಿರೀಕ್ಷಕರು ಸೇರಿದಂತೆ ಒಟ್ಟು 1,003 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಐಟಿಐ ಪಾಸಾಗಿ ರೈಲ್ವೆ ಇಲಾಖೆಯಲ್ಲಿ ನೇಮಕಾತಿ ಬಯಸುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಇದು ಅಪ್ಪರೆಂಟಿಸ್ ಶಿಪ್ ಆಗಿದ್ದು, ಇದಕ್ಕೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಇರುವುದರಿಂದ ಹಾಗಾಗಿ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮಾರ್ಚ್ 03, 2025 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕವು 02 ಏಪ್ರಿಲ್ 2025 ಆಗಿದೆ.
ನೇಮಕಾತಿಯ ವಿವರ : ಈ ನೇಮಕಾತಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದವರಿಗೆ ಖಾಯಂ ಆಗಿ ನೇಮಕಾತಿ ಮಾಡಿಕೊಳ್ಳುವುದಿಲ್ಲ ಬದಲಾಗಿ ಇದು ಶಿಶುಕ್ಷು (Apprenticeshi) ತರಬೇತಿಯಾಗಿರುತ್ತದೆ.
ಯಾವ ವಯಸ್ಸಿನ ಅಭ್ಯರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ?
ಇದಕ್ಕೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷದ ಮೇಲಿದ್ದು ಗರಿಷ್ಠ 24 ವರ್ಷದ ಒಳಗಿರುವವರು ಮಾತ್ರ ಅರ್ಹತೆಯನ್ನು ಹೊಂದಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಒಂದು ವೇಳೆ ನೀವು ಈ ಕೆಳಗಿನ ಮೀಸಲಾತಿ ವರ್ಗಗಳ ಅಡಿಯಲ್ಲಿ ಬರುವುದಾದರೆ ನಿಮಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಕೂಡ ನೀಡಲಾಗುತ್ತದೆ.
* ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ – 03 ವರ್ಷ
* ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗಗಳ ಅಭ್ಯರ್ಥಿಗಳಿಗೆ – 05 ವರ್ಷ
* ಮಾಜಿ ಸೈನಿಕ ಹಾಗೂ ಅಂಗವಿಕಲ ವರ್ಗಗಳ ಅಭ್ಯರ್ಥಿಗಳಿಗೆ – 10 ವರ್ಷ
ಹಾಗಿದ್ದರೆ ಅಪ್ಲೈ ಮಾಡುವ ವಿಧಾನ ಹೇಗೆ?
ನೀವು ಇದಕ್ಕೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿದ್ದಲ್ಲಿ, ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣವಾಗಿರುವಂತಹ apprenticeship india ಗೆ ಭೇಟಿ ನೀಡಿ ನೋಂದಣಿ ಮಾಡಿ ಅರ್ಜಿ ಸಲ್ಲಿಸಿರಿ. ಇದರ ಅಧಿಕೃತ ಜಾಲತಾಣದ ವಿಳಾಸವನ್ನು ನಾವು ಕೆಳಗೆ ನೀಡಿದ್ದೇವೆ.
Apply online: https://www.apprenticeshipindia.gov.in/
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: