ತಹಶೀಲ್ದಾರ್, ಪೊಲೀಸರ ಎದುರೇ ಕಾಂಗ್ರೆಸ್ ಮುಖಂಡ ಆತ್ಮಹತ್ಯೆಗೆ ಯತ್ನ!

ಚಿಕ್ಕಮಗಳೂರು: ಜಿಲ್ಲೆ ಶೃಂಗೇರಿಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ರಫೀಕ್ ಅಹಮದ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ದಾರುಣ ಘಟನೆ ಶೃಂಗೇರಿ ತಹಶೀಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲೇ ನಡೆದಿದ್ದು, ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
ಆತ್ಮಹತ್ಯೆಗೆ ಯತ್ನಕ್ಕೆ ಕಾರಣ ಏನು?
ರಫೀಕ್ ಅಹಮದ್ ತನ್ನ ವ್ಯಾಪಾರಕ್ಕಾಗಿ ಹಾಕಿಕೊಂಡಿದ್ದ ಶೆಡ್ ತೆರವು ಮಾಡುವ ವೇಳೆ ಈ ಘಟನೆ ನಡೆದಿದೆ. ತಹಶೀಲ್ದಾರ್ ಹಾಗೂ ಪೊಲೀಸರು ಸುಳ್ಳು ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ.
ಶ್ರೀಮಂತರ ಅಪಾರ್ಟ್ಮೆಂಟ್ ನಿರ್ಮಾಣ, ಕೆರೆ ಹಾಗೂ ಸರಕಾರಿ ಭೂಮಿ ಅಕ್ರಮ ಸ್ವಾಧೀನ ಕುರಿತಂತೆ ಯಾವುದೇ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.
“ಶಾಸಕ ರಾಜೇಗೌಡರನ್ನು ಗೆಲ್ಲಿಸಲು ನಾವು ಜೀವ ತೇಯ್ದಿದ್ದೇವೆ. ಅವರೂ ಇಲ್ಲ. ಅವರಿಗೆ ದೇವರು ಒಳ್ಳೆಯದು ಮಾಡಲಿ”, ಎಂದು ಆತ್ಮಹತ್ಯೆಗೆ ಯತ್ನಿಸುವ ಮೊದಲು ರಫೀಕ್ ಅಹಮದ್ ಹೇಳಿದ್ದಾಗಿ ತಿಳಿದುಬಂದಿದೆ.
ಬಡವರಿಗೊಂದು ಕಾನೂನು, ಶ್ರೀಮಂತರಿಗೊಂದು ಕಾನೂನು?
ಬಡವರು ಜೀವನ ಸಾಗಿಸಲು ಶೆಡ್ ಹಾಕಿದರೆ ಅಕ್ರಮ, ಆದರೆ ಶ್ರೀಮಂತರ ಹೋಟೆಲ್, ಅಪಾರ್ಟ್ಮೆಂಟ್, ಕೆರೆ ಒತ್ತುವರಿ ಮಾಡಿದರೂ ಕ್ರಮವಿಲ್ಲ ಎಂಬ ಪ್ರಶ್ನೆ ಉದ್ಭವಿಸಿದೆ. ಈ ವಿಷಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BR3b3qhWZWaCzpD1m6N5uu