ರಂಝಾನ್ ಉಪವಾಸ: ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅಸ್ವಸ್ಥ

A.R.Rahman Hospitalised– ನವದೆಹಲಿ: ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಲಂಡನ್‌ನಿಂದ ಹಿಂತಿರುಗಿದ ನಂತರ ಎ.ಆರ್. ರೆಹಮಾನ್ ಅನಾರೋಗ್ಯಕ್ಕೊಳಗಾಗಿದ್ದಾರೆ. ಹೀಗಾಗಿ ನಿನ್ನೆ ರಾತ್ರಿ ತಪಾಸಣೆಗಾಗಿ ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ಅವರು ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿರುವುದು ಪತ್ತೆಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ರಂಜಾನ್ ಉಪವಾಸ ಆಚರಣೆ ಮಾಡುತ್ತಿರುವ ಹಿನ್ನೆಲೆ ಎ.ಆರ್. ರೆಹಮಾನ್ ಅವರಿಗೆ ನಿರ್ಜಲೀಕರಣ ಸಮಸ್ಯೆ ಉಂಟಾಗಿದೆ. ಅವರು ಚೆನ್ನಾಗಿದ್ದಾರೆ, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಎ.ಆರ್. ರೆಹಮಾನ್ ಅವರ ಆಪ್ತರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: