ನಟ ರಮೇಶ್ ಅರವಿಂದ್ ಕುಟುಂಬ ಸಮೇತ ನಿಡುವಾಳೆ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ನಿಡುವಾಳೆ: ಪ್ರಸಿದ್ಧ ಕನ್ನಡ ಚಿತ್ರನಟ ರಮೇಶ್ ಅರವಿಂದ್ ಅವರು ಕುಟುಂಬ ಸಮೇತರಾಗಿ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ಶ್ರದ್ಧಾ ಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತಾಧಿಕಾರಿ ಶ್ರೀ ಸುನೀಲ್ ಜೆ. ಗೌಡ್ರು ಅವರು ರಮೇಶ್ ಅರವಿಂದ್ ಅವರಿಗೆ ಶಾಲು ಹೊದೆಸಿ ಸನ್ಮಾನಿಸಿದರು. ದೇವಾಲಯದ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಅರ್ಚಕರಾದ ನಾಗೇಂದ್ರ ಕಾರಂತ್, ಸಿಬ್ಬಂದಿ ಸೂರ್ಯನಾರಾಯಣ, ಹಾಗೂ ಸ್ಥಳೀಯ ಗ್ರಾಮಸ್ಥರು ಈ ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಿದರು.
ಪೂಜಾ ಕಾರ್ಯಕ್ರಮವು ಶ್ರದ್ಧಾ ಮತ್ತು ಭಕ್ತಿಯ ವಾತಾವರಣದಲ್ಲಿ ನಡೆಯಿತು. ದೇವಾಲಯಕ್ಕೆ ಆಗಮಿಸಿದ ರಮೇಶ್ ಅರವಿಂದ್ ಅವರ ಅಭಿಮಾನಿಗಳು ಹಾಗೂ ಭಕ್ತರು ಅವರೊಂದಿಗೆ ಕ್ಷಣಕಾಲ ಸಂವಾದ ನಡೆಸಿ ಸಂತೋಷ ವ್ಯಕ್ತಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: